ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 49ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ತಂಡವು 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿದೆ.

ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ಸಾಧಿಸಲು ಪಂಜಾಬ್ ಕಿಂಗ್ಸ್ ತಂಡವು 236 ರನ್ ಗಳಿಸಬೇಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ ಆರಂಭಿಕರು, ಸ್ಪೋಟಕ ಆಟಕ್ಕೆ ಒತ್ತು ನೀಡಿದರು. ಅಭಿಷೇಕ್ ಶರ್ಮಾ, ಕೇವಲ 13 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ಸಹಿತ 35 ರನ್ ಗಳಿಸಿದರು. ಟ್ರಾವಿಸ್ ಹೆಡ್ ಅವರು 19 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಸಹಿತ 38 ರನ್ ಬಾರಿಸಿದರು.

ಇಶಾನ್ ಕಿಶನ್ (55 ರನ್: 32 ಎಸೆತ) ಹಾಗೂ ಅನುಭವಿ ಆಟಗಾರ ಹೆನ್ರಿಚ್ ಕ್ಲಾಸೆನ್ (69 ರನ್: 43 ಎಸೆತ) ಅರ್ಧಶತಕ ಬಾರಿಸುವ ಮೂಲಕ ಆಸರೆಯಾದರು. ನಿತೀಶ್ ರೆಡ್ಡಿ, 13 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 29 ರನ್ ಗಳಿಸುವ ಮೂಲಕ ತಂಡದ ಮೊತ್ತವು 230ರ ಗಡಿ ದಾಟಲು ಸಹಾಯ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.