ಲಖನೌ: ಬುಧವಾರ ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 32ನೇ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ವೇಗಿ ನಾಂಡ್ರೆ ಬರ್ಗರ್ ಅವರಿಗೆ ಪಂದ್ಯ ಶುಲ್ಕದ ಶೇ10 ರಷ್ಟು ದಂಡ ವಿಧಿಸಲಾಗಿದೆ.

ಇಲ್ಲಿನ ಏಕಾನಾ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಸುಲಭ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರಾಜಸ್ಥಾನ ಪರ ಉತ್ತಮ ಬೌಲಿಂಗ್ ಮಾಡಿ 2 ಪ್ರಮುಖ ವಿಕೆಟ್ಗಳನ್ನು ಬರ್ಗರ್ ಕಬಳಿಸಿದರು. ವಿಕೆಟ್ ಪಡೆದ ಬಳಿಕ ಎದುರಾಳಿ ಆಟಗಾರರನ್ನು ಕೆರಳಿಸುವ ಪ್ರಚೋದನಕಾರಿ ರೀತಿಯ ಸಂಭ್ರಮಾಚರಣೆ ಮಾಡಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಆಟಗಾರರಾದ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಅವರ ವಿಕೆಟ್ ಪಡೆದು ಆಟಗಾರರನ್ನು ಪ್ರಚೋದಿಸುವ ಸೆಲಿಬ್ರೇಷನ್ ಮಾಡಿದ್ದಾರೆ ಎಂದು ಉಲ್ಲೇಖಿಸಿ, ಐಪಿಎಲ್ನ ನೀತಿ ಸಂಹಿತೆಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಬರ್ಗರ್ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ವೇಗಿ ನಾಂಡ್ರೆ ಬರ್ಗರ್ಗೆ ದಂಡದ ಜೊತೆಗೆ ಒಂದು ಡಿಮೆರಿಟ್ ಅಂಕವನ್ನು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.