ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಆವೃತ್ತಿಯು ಇಂದಿನಿಂದ (ಮಾ.28) ಆರಂಭವಾಗಲಿದೆ. ಈಗಾಗಲೇ ಚುಟುಕು ಕ್ರಿಕೆಟ್ನ ಕ್ರೇಜ್ ಶುರುವಾಗಿದೆ.

ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಹಾಗೂ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಈ ಎರಡೂ ತಂಡಗಳು ಇದುವರೆಗೂ ಐಪಿಎಲ್ ಟೂರ್ನಿಯಲ್ಲಿ 26 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಎಸ್ಆರ್ಎಚ್ ತಂಡವು 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್ಸಿಬಿ ತಂಡವು 11 ಪಂದ್ಯಗಳನ್ನು ಗೆದ್ದಿದೆ. ಇನ್ನೂ 2 ಪಂದ್ಯಗಳು ರದ್ದಾಗಿವೆ.

ಚಿನ್ನಸ್ವಾಮಿ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೂ 8 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಆರ್ಸಿಬಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಎರಡೂ ತಂಡಗಳು ಬಲಾಢ್ಯ ಬ್ಯಾಟಿಂಗ್ ಪಡೆಯನ್ನು ಹೊಂದಿವೆ. ಚಿನ್ನಸ್ವಾಮಿ ಮೈದಾನ ಕೂಡ ಬ್ಯಾಟಿಂಗ್ ಸ್ನೇಹಿಯಾಗಿದ್ದು, ರನ್ ಹೊಳೆ ಹರಿಯುವ ನಿರೀಕ್ಷೆಯಿದೆ.

2024ರ ಆವೃತ್ತಿಯಲ್ಲಿ ಉಭಯ ತಂಡಗಳು ಚಿನ್ನಸ್ವಾಮಿ ಮೈದಾನದಲ್ಲಿ ಎದುರಾದಾಗ, ಎಸ್ಆರ್ಎಚ್ ತಂಡವು ಆ ಪಂದ್ಯದಲ್ಲಿ 25 ರನ್ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಎಸ್ಆರ್ಎಚ್ ತಂಡವು ಟ್ರಾವಿಸ್ ಹೆಡ್ ಅವರ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿತ್ತು. ಬೃಹತ್ ರನ್ಗಳ ಗುರಿ ಬೆನ್ನಟಿದ ಆರ್ಸಿಬಿ ತಂಡವು ದಿನೇಶ್ ಕಾರ್ತಿಕ್ ಅವರ ಅಮೋಘ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 262 ರನ್ ಗಳಿಸಿತ್ತು. ಇಂದು ಪಂದ್ಯ ಗೆಲ್ಲುವ ಮೂಲಕ ಆರ್ಸಿಬಿ ತಂಡವು ಸೇಡು ತೀರಿಸಿಕೊಳ್ಳವ ನಿರೀಕ್ಷೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.