ಮುಂಬೈ: 2024ರ ಐಪಿಎಲ್ನಲ್ಲಿ ಕೋಲ್ಕತ್ತ ನೈಟ್ರೈಡರ್ಸ್ ತಂಡವು ಪ್ರಶಸ್ತಿ ಗೆದ್ದ ನಂತರ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಆರಂಭಿಕ ಆಟಗಾರ ಫಿನ್ ಸಾಲ್ಟ್ ಅವರನ್ನು ಕೈಬಿಟ್ಟು ಕೆಕೆಅರ್ ಫ್ರಾಂಚೈಸಿಯು ತಪ್ಪು ಮಾಡಿದೆ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಕೆಕೆಅರ್ ತಂಡವು ಅಯ್ಯರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳದ ಕಾರಣ ಅವರು ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಗೊಂಡಿದ್ದರು. ನಾಯಕತ್ವ ವಹಿಸಿಕೊಂಡ ಮೊದಲನೇ ಆವೃತ್ತಿಯಲ್ಲೇ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿದ್ದ ಫಿನ್ ಸಾಲ್ಟ್, ಸ್ಫೋಟಕ ಆಟದ ಮೂಲಕ ಆರ್ಸಿಬಿ ತಂಡವು ಮೊದಲ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

ಕೆಕೆಆರ್ ತಂಡವು ಆಟಗಾರರನ್ನು ಉಳಿಸಿಕೊಳ್ಳುವ ವಿಷಯದಲ್ಲಿ ಸತತವಾಗಿ ಎಡವುತ್ತಿದೆ. ಟ್ರೋಫಿ ಗೆಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ಅಯ್ಯರ್ ಹಾಗೂ ಸಾಲ್ಟ್ ಅವರನ್ನು ಕೈಬಿಟ್ಟಿದ್ದು ತಪ್ಪು ನಿರ್ಧಾರ ಎಂದು ಜಿಯೋ ಹಾಟ್ಸ್ಟಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಅನುಭವಿ ಆಟಗಾರ. ದೇಶಿ ಕ್ರಿಕೆಟ್ನಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದರು. ಆದರೆ, ಅವರು ಇದುವರೆಗೂ ನಾಯಕರಾಗಿ ಅವರು ಐಪಿಎಲ್ ಟ್ರೋಫಿ ಗೆದ್ದಿಲ್ಲ. ಪ್ರಶಸ್ತಿ ಗೆದ್ದಿರುವ ನಾಯಕನು ನಾಯಕತ್ವವನ್ನು ವಹಿಸಿಕೊಳ್ಳುವುದು ತಂಡದ ಮನೋಬಲವನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶ್ರೇಯಸ್ ಅಯ್ಯರ್ ಮನ್ನಣೆ ಸಿಗದ ನಾಯಕ. ಒಂದು ತಂಡಕ್ಕೆ ಪ್ರಶಸ್ತಿ ಗೆಲ್ಲಿಸಿಕೊಟ್ಟು, ಮರುವರ್ಷವೇ ಮತ್ತೊಂದು ತಂಡವನ್ನು ಫೈನಲ್ಗೆ ಮುನ್ನಡೆಸಿದ್ದಾರೆ. ಅದರಲ್ಲೂ ಕಳೆದ ಹತ್ತು ವರ್ಷಗಳಿಂದ ಫೈನಲ್ ಪ್ರವೇಶಿಸದಿದ್ದ ಪಂಜಾಬ್ ತಂಡವನ್ನು ಪ್ರಶಸ್ತಿ ಸುತ್ತಿಗೆ ಮುನ್ನಡೆಸಿದ್ದು ಅವರ ನಾಯಕತ್ವ ಸಾಮರ್ಥ್ಯವನ್ನು ತೋರಿಸಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.