ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್ 26ರಿಂದ ಐಪಿಎಲ್: ಪ್ರೇಕ್ಷಕರಿಗೆ ಅವಕಾಶ

Last Updated 24 ಫೆಬ್ರುವರಿ 2022, 18:13 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಮಾರ್ಚ್‌ 26ರಿಂದ ಮೇ 29ರವರೆಗೆ ನಡೆಯಲಿದೆ.

ಮುಂಬೈ ಮತ್ತು ಪುಣೆಯ ಕ್ರೀಡಾಂಗಣಗಳಲ್ಲಿ ಟೂರ್ನಿಯ ಪಂದ್ಯಗಳು ನಡೆಯಲಿವೆ. ಕ್ರೀಡಾಂಗಣ ಸಾಮರ್ಥ್ಯದ ಶೇ 40ರಷ್ಟು ಪ್ರೇಕ್ಷಕರಿಗೆ ಪ್ರವೇಶ ನೀಡಲು ನಿರ್ಧರಿಸಲಾಗಿದೆ.

‘ಮುಂದಿನ ತಿಂಗಳು 26ರಿಂದ ಐಪಿಎಲ್ ಆರಂಭವಾಗಲಿದೆ’ ಎಂದು ಗುರುವಾರ ಆಡಳಿತ ಸಮಿತಿಯ ಸಭೆಯ ನಂತರ ಮುಖ್ಯಸ್ಥ ಬ್ರಿಜೇಶ್ ಪಟೇಲ್ ತಿಳಿಸಿದರು.

ಈ ಬಾರಿ ಎರಡು ಹೊಸ ತಂಡಗಳಾದ ಲಖನೌ ಸೂಪರ್‌ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್‌ ಕಣಕ್ಕಿಳಿಯಲಿವೆ. ಒಟ್ಟು 74 ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣ, ಬ್ರೆಬೊರ್ನ್ ಕ್ರೀಡಾಂಗಣ ಮತ್ತು ನವಿಮುಂಬೈನಲ್ಲಿರುವ ಡಿ.ವೈ. ಪಾಟೀಲ ಮೈದಾನ ಮತ್ತು ಪುಣೆಯ ಗಹುಂಜೆ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ.

‘ಮಹಾರಾಷ್ಟ್ರ ಸರ್ಕಾರವು ಪ್ರೇಕ್ಷಕರಿಗೆ ಅವಕಾಶ ಕೊಡಲು ಅನುಮತಿ ನೀಡಿದೆ. ಆರಂಭದಲ್ಲಿ ಶೇ 40ರಷ್ಟು ಜನರಿಗೆ ಅವಕಾಶ ನೀಡಲಾಗುವುದು. ಕೋವಿಡ್ ಪರಿಸ್ಥಿತಿಯು ಸಂಪೂರ್ಣ ನಿಯಂತ್ರಣದಲ್ಲಿದ್ದರೆ ಪ್ರೇಕ್ಷಕರ ಸಂಖ್ಯೆ ಹೆಚ್ಚಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಅಹಮದಾಬಾದಿನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT