ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಆವೃತ್ತಿ ಮಾರ್ಚ್ 28ರಿಂದ ಆರಂಭವಾಗಲಿದ್ದು, ಮೇ ಕೊನೆಯ ವಾರದವರೆಗೂ ಮುಂದುವರಿಯಲಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿಷಯ ಹಂಚಿಕೊಂಡಿರುವ ಐಪಿಎಲ್ನ ಅಧಿಕೃತ ಪ್ರಸಾರದ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್, ‘ಕಾಯುವ ಸಮಯ ಮುಗಿದಿದೆ, ‘ಟಾಟಾಐಪಿಎಲ್2026’ ಮಾರ್ಚ್ 28ರಿಂದ ಆರಂಭವಾಗುತ್ತಿದ್ದು, ಸಕಲವೂ ಸಜ್ಜಾಗಿದೆ’ ಎಂದಿದೆ.

ಮಾರ್ಚ್ 8ರಂದು ಅಹಮದಾಬಾದ್ನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು ಭಾರತವು ಭರ್ಜರಿ 96 ರನ್ಗಳ ಜಯ ಸಾಧಿಸಿದ ಬೆನ್ನಲ್ಲೇ ಐಪಿಎಲ್ ಆರಂಭದ ಸುದ್ದಿಯೂ ಹೊರಬಿದ್ದಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

18ನೇ ಆವೃತ್ತಿಯ ಚಾಂಪಿಯನ್ ಆದ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಆರಂಭದ ಮತ್ತು ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಯೋಜಿಸಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಮುಂದಿನ ದಿನಗಳಲ್ಲಿ ಐಪಿಎಲ್ ಫ್ರಾಂಚೈಸಿಗಳ ಲೀಗ್ ಪಂದ್ಯಗಳನ್ನು ನಿಗದಿಪಡಿಸಿ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

19ನೇ ಆವೃತ್ತಿಯ ಆರಂಭಿಕ ಪಂದ್ಯದ ಜತೆ 5 ಲೀಗ್ ಪಂದ್ಯಗಳನ್ನು ಆರ್ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ಈ ಮೊದಲು ವರದಿಯಾಗಿತ್ತು. ಆದರೆ 18ನೇ ಆವೃತ್ತಿಯ ವಿಜಯೋತ್ಸವದ (2025ರ ಜೂನ್ 4) ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಮೃತಪಟ್ಟ ಬೆನ್ನಲ್ಲೇ ತವರು ನೆಲದಲ್ಲಿ ಆರ್ಸಿಬಿ ಆಡುವುದು ಅನುಮಾನ ಎಂದೇ ಹೇಳಲಾಗಿತ್ತು.

ಇದಕ್ಕೆ ಪೂರಕವಾಗಿ, ದೇಶೀಯ ಟೂರ್ನಿಗಳಾದ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಸಹಿತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಯಾವುದೇ ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲಿ ಆಯೋಜಿಸಿರಲಿಲ್ಲ.

ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಇರುವುದರಿಂದ 19ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಬಿಡುಗಡೆಯೂ ತಡವಾಗಿದೆ. ಮಾಹಿತಿ ಪ್ರಕಾರ ಈ ಬಾರಿಯ ಐಪಿಎಲ್ ಎರಡು ಭಾಗವಾಗಿ ಆಡಿಸುವ ಸಾಧ್ಯತೆಯೂ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಎರಡನೇ ಹಂತದಲ್ಲಿ ಪ್ಲೇ–ಆಫ್ ಪಂದ್ಯಗಳು ಇರಲಿದ್ದು, ಇವುಗಳ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲು ನಿರ್ಧರಿಸಲಾಗಿದೆ ಎಂದೆನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.