ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಟಿ20 ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ, ಕ್ರಿಕೆಟ್ ಅಭಿಮಾನಿಗಳು ಎರಡು ತಿಂಗಳುಗಳ ಕಾಲ ನಡೆಯುವ ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದಾರೆ.

ಐಪಿಎಲ್–2026ರ ವೇಳಾಪಟ್ಟಿ

ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 28ರಂದು ಪ್ರಾರಂಭವಾಗಲಿದೆ ಎಂದು ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ಭಾನುವಾರ (ಮಾರ್ಚ್ 8) ದಂದು ದೃಢಪಡಿಸಿದೆ.

ಪಂದ್ಯಾವಳಿಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆದರೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.

ಐಪಿಎಲ್–2026ರ ಆವೃತ್ತಿಯು ಮಾರ್ಚ್ 28ರಿಂದ ಆರಂಭಗೊಳ್ಳಲಿದ್ದು, ಪ್ಲೇಆಫ್ ಪಂದ್ಯಗಳು ಮೇ 26ರಿಂದ ಪ್ರಾರಂಭವಾಗಲಿವೆ. ಕ್ವಾಲಿಫೈಯರ್ 1 ಮತ್ತು ಫೈನಲ್ ಪಂದ್ಯಗಳು ಮೇ 31 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಆಯೋಜಿಸುವುದು ಖಚಿತವಾಗಿದೆ.

ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಸೇರಿದಂತೆ ಇತರ ಪ್ಲೇಆಫ್ ಪಂದ್ಯಗಳು ಅಹಮದಾಬಾದ್ ಮತ್ತು ರಾಯ್ಪುರದಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ, ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎರಡು ಹಂತಗಳಲ್ಲಿ ಪಂದ್ಯಗಳ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಆರಂಭದಲ್ಲಿ ಮೊದಲ 15 ದಿನಗಳ ವೇಳಾಪಟ್ಟಿ ಘೋಷಿಸಿ, ನಂತರದಲ್ಲಿ ಉಳಿದ ಪಂದ್ಯಗಳಿಗೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ.

ಐಪಿಎಲ್ ಉದ್ಘಾಟನಾ ಪಂದ್ಯ

ಸಂಪ್ರದಾಯದಂತೆ ಕಳೆದ ಆವೃತ್ತಿಯಲ್ಲಿ ಫೈನಲ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವ ನಿರೀಕ್ಷೆ ಇದೆ. ಆದರೆ, ಬಿಸಿಸಿಐ ಅಂತಿಮ ಘೋಷಣೆ ಹೊರಡಿಸಿಲ್ಲ.

ಐಪಿಎಲ್ ಸ್ವರೂಪ

ಇಂಡಿಯನ್ ಪ್ರೀಮಿಯರ್ ಲೀಗ್ನ 10 ತಂಡಗಳು 'ಡಬಲ್ ರೌಂಡ್-ರಾಬಿನ್' ಸ್ವರೂಪದಲ್ಲಿ ಆಡಲಿವೆ. ಇದರಲ್ಲಿ ಪ್ರತಿ ತಂಡವು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿವೆ. ಒಮ್ಮೆ ತವರಿನಲ್ಲಿ, ಮತ್ತೊಮ್ಮೆ ಬೇರೆ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಪಂದ್ಯಾವಳಿಯು ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ಮತ್ತು ರಾಯ್ಪುರ ಸೇರಿದಂತೆ 10 ಪ್ರಮುಖ ನಗರಗಳಲ್ಲಿ ನಡೆಯಲಿವೆ.

2026 ರ ಆವೃತ್ತಿಯಲ್ಲಿ 80 ಲೀಗ್ ಪಂದ್ಯಗಳು ಮತ್ತು 4 ಪ್ಲೇಆಫ್ ಪಂದ್ಯಗಳು ನಡೆಯಲಿವೆ. ಸಾಮಾನ್ಯವಾಗಿ ಐಪಿಎಲ್ನಲ್ಲಿ 74 ಪಂದ್ಯಗಳು ನಡೆಯುತ್ತಿದ್ದವು. ಈ ಬಾರಿ ಪಂದ್ಯಗಳ ಸಂಖ್ಯೆ ಹೆಚ್ಚಳವಾಗಿದ್ದು, 84 ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಈ ಬಾರಿ ಅತಿ ಹೆಚ್ಚು ಐಪಿಎಲ್ ಪಂದ್ಯಗಳು ನಿಗದಿಯಾಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.