ಬೆಂಗಳೂರು: ಬುಧವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆದ್ದಿದೆ. ಈ ಪಂದ್ಯದಲ್ಲಿ ಆರ್ಸಿಬಿಯ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅವರು ಸಿಕ್ಸರ್ ಬಾರಿಸುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲಿಯೂ ಉತ್ತಮ ಪ್ರದರ್ಶನ ನೀಡಿತು. ಪಂದ್ಯದಲ್ಲಿ ಆರ್ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 34 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಿತ 49 ರನ್ಗಳಿಸಿ, 1 ರನ್ನಿಂದ ಅರ್ಧಶತಕ ವಂಚಿತರಾದರು.

ಅವರು ಒಂದು ಸಿಕ್ಸರ್ ಬಾರಿಸುತ್ತಿದ್ದಂತೆ ಐಪಿಎಲ್ನಲ್ಲಿ ಕೆ.ಎಲ್. ರಾಹುಲ್ ಅವರ ದಾಖಲೆ ಒಂದನ್ನು ಮುರಿದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಈವರೆಗೆ ಭಾರತೀಯ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನು ವಿರಾಟ್ ಮಾಡಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಕನ್ನಡಿಗ ಕೆ.ಎಲ್. ರಾಹುಲ್ ಅವರ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿ ಅವರು ಇದುವರೆಗೆ ಐಪಿಎಲ್ನಲ್ಲಿ ಆರಂಭಿಕ ಆಟಗಾರರಾಗಿ 185 ಸಿಕ್ಸರ್ಗಳನ್ನು ಬಾರಿಸಿದ್ದಾರೆ. 2ನೇ ಸ್ಥಾನದಲ್ಲಿ ಕೆ.ಎಲ್. ರಾಹುಲ್ ಇದ್ದು, ಆರಂಭಿಕರಾಗಿ 184 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಬ್ಯಾಟರ್ ರೋಹಿತ್ ಶರ್ಮಾ ಅವರು 148 ಸಿಕ್ಸರ್ ಗಳಿಸುವ ಮೂಲಕ 3ನೇ ಸ್ಥಾನದಲ್ಲಿದ್ದಾರೆ. ಇದಾದ ಬಳಿಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಅವರು ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಇವರು ಒಟ್ಟು 326 ಸಿಕ್ಸರ್ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ಡೇವಿಡ್ ವಾರ್ನರ್ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ. ಸದ್ಯ 2026ರ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಅವರು ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.