ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2008ರಲ್ಲಿ ಪ್ರಾರಂಭವಾಗಿದೆ. ಆರಂಭದಲ್ಲಿ 8 ತಂಡಗಳ ಜೊತೆ ಆರಂಭವಾದ ಈ ಟೂರ್ನಿಯನ್ನು ಪ್ರಸ್ತುತ 10 ತಂಡಗಳು ಆಡುತ್ತಿವೆ. ಪ್ರತಿಷ್ಠಿತ ಟೂರ್ನಿಯು 19 ಸೀಸನ್ಗಳನ್ನು ಪೂರ್ಣಗೊಳಿಸಿದ್ದು, ಈ ಬಾರಿ ಆರ್ಸಿಬಿ ತಂಡ ಚಾಂಪಿಯನ್ ಆಗುವ ಮೂಲಕ ಸತತ ಎರಡನೇ ಬಾರಿ ಚಾಂಪಿಯನ್ ಆದ ಸಾಧನೆ ಮಾಡಿತು.

ಇದಕ್ಕೂ ಮೊದಲು ಚೆನ್ನೈ ಸೂಪರ್ ಕಿಂಗ್ಸ್ 2010 ಹಾಗೂ 2011ರಲ್ಲಿ ಸತತ ಎರಡು ಆವೃತ್ತಿಗಳಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ 2019 ಹಾಗೂ 2020ರ ಸೀಸನ್ಗಳಲ್ಲಿ ಸತತ ಚಾಂಪಿಯನ್ ಆಗಿ ಸಾಧನೆ ಮಾಡಿತ್ತು.

19 ವರ್ಷಗಳ ಐಪಿಎಲ್ ಹಾದಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ. ಆದರೆ, ಇನ್ನೂ ಕೆಲವು ತಂಡಗಳು ಏಕೈಕ ಟ್ರೋಫಿಗಾಗಿ ಎದುರು ನೋಡುತ್ತಿರುವುದು ವಿಶೇಷ.

ಯಾವುದೇ ಟ್ರೋಫಿ ಗೆಲ್ಲದ ತಂಡಗಳು

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 2008ರಿಂದ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಹಾಗೂ 2021ರಿಂದ ಐಪಿಎಲ್ಗೆ ಪದಾರ್ಪಣೆ ಮಾಡಿರುವ ಲಖನೌ ಸೂಪರ್ಜೈಂಟ್ಸ್ ತಂಡಗಳು ಇದುವರೆಗೆ ಯಾವುದೇ ಟ್ರೋಫಿ ಗೆದ್ದಿಲ್ಲ.

2008 ಆರಂಭಿಕ ಸೀಸನ್ ಅನ್ನು ಶೇನ್ ವಾರ್ನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡವು ಚಾಂಪಿಯನ್ ಆಗಿತ್ತು. 2009ರಲ್ಲಿ ಆ್ಯಡಂ ಗಿಲ್ಕ್ರಿಸ್ಟ್ ನಾಯಕತ್ವದಲ್ಲಿ ಡೆಕ್ಕನ್ ಚಾರ್ಜರ್, 2010 ಹಾಗೂ 2011 ರಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು.

2012ರಲ್ಲಿ ಗೌತಮ್ ಗಂಭೀರ್ ನಾಯಕತ್ವದ ಕೆಕೆಆರ್, 2013ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್, 2014ರಲ್ಲಿ ಗಂಭೀರ್ ನಾಯಕತ್ವದ ಕೆಕೆಆರ್, 2015ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಎಂಐ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದ್ದವು.

2016ರಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಎಸ್ಆರ್ಎಚ್, 2017ರಲ್ಲಿ ರೋಹಿತ್ ನಾಯತ್ವದ ಎಂಐ, 2018ರಲ್ಲಿ ಧೋನಿ ನಾಯತ್ವದ ಸಿಎಸ್ಕೆ ಹಾಗೂ 2019 ಮತ್ತು 2020ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ಚಾಂಪಿಯನ್ ಆಗಿತ್ತು.

2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2022ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟನ್ಸ್, 2023ರಲ್ಲಿ ಧೋನಿ ನಾಯಕತ್ವದಲ್ಲಿ ಸಿಎಸ್ಕೆ, 2024ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್, 2025ರಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್ಸಿಬಿ ಚಾಂಪಿಯನ್ ಆಗಿತ್ತು. ಇನ್ನೂ ಈ ಬಾರಿ (2026) ಕೂಡ ಆರ್ಸಿಬಿ ಕಪ್ ಗೆಲ್ಲುವ ಮೂಲಕ ಸತತ ಟ್ರೋಫಿ ಗೆದ್ದ ಸಾಧನೆ ಮಾಡಿದೆ.

2008ರಿಂದ ಇದುವರೆಗೂ ವಿಜೇತ ಹಾಗೂ ರನ್ನರ್ ಅಪ್ ತಂಡಗಳ ವಿವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.