ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಜರ್ಮನಿ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಇದರೊಂದಿಗೆ ಐರ್ಲೆಂಡ್ ಹಾದಿಯೂ ಸುಗಮವಾಯಿತು. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿರುವ ಐರ್ಲೆಂಡ್ ಅರ್ಹತಾ ಸುತ್ತಿನ ಇನ್ನೊಂದು ಪಂದ್ಯದಲ್ಲಿ ಈಗಾಗಲೇ ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದಿರುವ ಸ್ಕಾಟ್ಲೆಂಡ್ ಎದುರು ಸೆಣಸಲಿದೆ. ಟೂರ್ನಿಯಲ್ಲಿ ಐದು ಪಂದ್ಯಗಳನ್ನು ಆಡಿರುವ ಐರ್ಲೆಂಡ್ ತಂಡವು ನಾಲ್ಕರಲ್ಲಿ ಜಯಿಸಿದೆ. ಸ್ಕಾಟ್ಲೆಂಡ್ ವಿರುದ್ಧ ಗೆದ್ದರೆ ಅಗ್ರಸ್ಥಾನಕ್ಕೇರಲಿದೆ.