ಗುರುವಾರ , ಆಗಸ್ಟ್ 18, 2022
26 °C

IRE vs IND 2nd T20 | ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮ್ಯಾಲಹೈಡ್, ಡಬ್ಲಿನ್: ಟಿ–20 ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಮೊದಲ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರತಿರೋಧ ಒಡ್ಡಿದ್ದ ಐರ್ಲೆಂಡ್‌ ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸಿದ್ದ ಭಾರತ ತಂಡ, ಸರಣಿಯಲ್ಲಿ 1–0 ರಲ್ಲಿ ಮುನ್ನಡೆ ಸಾಧಿಸಿದೆ. 

ಇದು ಕೊನೆಯ ಪಂದ್ಯವಾಗಿದ್ದು, ಹಾರ್ದಿಕ್‌ ಪಾಂಡ್ಯ ಬಳಗ ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ 3 ಓವರ್‌ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದೆ. ಇಶಾನ್‌ ಕಿಶನ್‌ ಜತೆ ಸಂಜು ಸ್ಯಾಮ್ಸನ್ ಇನಿಂಗ್ಸ್‌ ಆರಂಭಿಸಿದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು