ಭಾನುವಾರ, ಜನವರಿ 26, 2020
31 °C

ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಇರ್ಫಾನ್ ಪಠಾಣ್ ನಿವೃತ್ತಿ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಎಡಗೈ ವೇಗದ ಬೌಲರ್ ಇರ್ಫಾನ್ ಪಠಾಣ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಘೋಷಿಸಿದ್ದಾರೆ. 29 ಟೆಸ್ಟ್, 120 ಏಕದಿನ ಮತ್ತು 24 ಟಿ20 ಪಂದ್ಯಗಳಲ್ಲಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 301 ವಿಕೆಟ್ ಗಳಿಸಿದ್ದಾರೆ.

2003ರ ಡಿಸೆಂಬರ್‌ನಲ್ಲಿ ತಮ್ಮ 19ನೇ ವಯಸ್ಸಿನಲ್ಲಿ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಅತಿಥೇಯ ತಂಡದ ವಿರುದ್ಧ ಪಠಾಣ್ ಮೊದಲ ಅಂತರರಾಷ್ಟ್ರೀಯ ಪಂದ್ಯವಾಡಿದ್ದರು. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮ್ಯಾಥ್ಯೂ ಹೇಡನ್ ಅವರನ್ನು ಔಟ್ ಮಾಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ವಿಕೆಟ್ ಪಡೆದಿದ್ದರು.

2006ರಲ್ಲಿ ಪಾಕಿಸ್ತಾನದ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. 2007ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ‘ಪಂದ್ಯಶ್ರೇಷ್ಠ’ ಗೌರವಕ್ಕೆ ಪಾತ್ರರಾಗಿದ್ದರು.

ಆಲ್‌ರೌಂಡರ್ ಆಗಿಯೂ ಗುರುತಿಸಿಕೊಂಡಿರುವ ಪಠಾಣ್ 29 ಟೆಸ್ಟ್‌ ಪಂದ್ಯಗಳಲ್ಲಿ ಸರಾಸರಿ 31.57ರಂತೆ ರನ್ ಕಲೆಹಾಕಿದ್ದಾರೆ. 40 ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ, 6 ಅರ್ಧಶತಕಗಳನ್ನೂ ದಾಖಲಿಸಿದ್ದಾರೆ. ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಕ್ರಮವಾಗಿ 23.39 ಹಾಗೂ 24.57 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು