ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್‌ ಸರಣಿಯಿಂದ ಹಿಂದೆ ಸರಿದ ‌ಇಶಾನ್‌: ಭರತ್‌ಗೆ ಬುಲಾವ್‌

Published 17 ಡಿಸೆಂಬರ್ 2023, 15:25 IST
Last Updated 17 ಡಿಸೆಂಬರ್ 2023, 15:25 IST
ಅಕ್ಷರ ಗಾತ್ರ

ಸೆಂಚುರಿಯನ್: ಭಾರತ ತಂಡದ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಇಶಾನ್ ಕಿಶನ್ ಅವರು ವೈಯಕ್ತಿಕ ಕಾರಣಗಳಿಂದ ತವರಿಗೆ ಮರಳಿರುವ ಕಾರಣ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ.

ಭಾರತ ‘ಎ’ ತಂಡವನ್ನು ಮುನ್ನಡೆಸುತ್ತಿರುವ ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿರುವ ಕೆ.ಎಸ್‌. ಭರತ್ (ಕೋನಾ ಶ್ರೀಕರ್‌ ಭರತ್‌) ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

‘ವೈಯಕ್ತಿಕ ಕಾರಣಗಳನ್ನು ನೀಡಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಬಿಡುಗಡೆ ಮಾಡುವಂತೆ ಇಶಾನ್  ಬಿಸಿಸಿಐಗೆ ಮನವಿ ಮಾಡಿದ್ದಾರೆ. ಅವರ ಮನವಿಗೆ ಸ್ಪಂದಿಸಲಾಗಿದೆ. ಇಶಾನ್ ಬದಲಿಗೆ ಭರತ್​ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ’ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಪರಿಷ್ಕೃತ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕವಾಡ್, ಕೆ.ಎಲ್. ರಾಹುಲ್ (ವಿಕೆಟ್​ ಕೀಪರ್​), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ‌, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್​ಪ್ರೀತ್​ ಬುಮ್ರಾ (ಉಪ ನಾಯಕ), ಪ್ರಸಿದ್ಧ ಕೃಷ್ಣ, ಕೆ.ಎಸ್ ಭರತ್ (ವಿಕೆಟ್​ ಕೀಪರ್​). 

ಕೆ.ಎಸ್‌. ಭರತ್
ಕೆ.ಎಸ್‌. ಭರತ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT