ಮಂಗಳವಾರ, ಜನವರಿ 21, 2020
29 °C

ರಣಜಿ: ದೆಹಲಿಗೆ ಇಶಾಂತ್‌, ಧವನ್ ಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಮತ್ತು ಮಧ್ಯಮ ವೇಗಿ ಇಶಾಂತ್ ಶರ್ಮಾ ಅವರನ್ನು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ದೆಹಲಿ ತಂಡಕ್ಕೆ ಕರೆಸಿಕೊಳ್ಳಲಾಗಿದೆ. 25ರಂದು ಆರಂಭವಾಗಲಿರುವ ಪಂದ್ಯದಲ್ಲಿ ದೆಹಲಿ, ಹೈದರಾಬಾದ್‌ ವಿರುದ್ಧ ಸೆಣಸಲಿದೆ.

ಆಟಗಾರರ ಒತ್ತಡ ಕಡಿಮೆ ಮಾಡುವ ಯೋಜನೆಯ ಅಂಗವಾಗಿ ಇಶಾಂತ್ ಶರ್ಮಾಗೆ ಎರಡು ಪಂದ್ಯಗಳಲ್ಲಿ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿತ್ತು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಆಡುತ್ತಿದ್ದಾಗ ಮೊಣಕಾಲಿಗೆ ಗಾಯಗೊಂಡಿದ್ದ ಶಿಖರ್ ಧವನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಫಿಟ್ ಆಗಿದ್ದಾರೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಘೋಷಿಸಿದೆ.

ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ಎದುರಿನ ಸರಣಿಗಳಿಗೆ ಆಯ್ಕೆಯಾಗಿರುವುದರಿಂದ ‘ಅಭ್ಯಾಸ’ಕ್ಕೆ ಅವರಿಗೆ ಉತ್ತಮ ಅವಕಾಶ ಲಭಿಸಿದಂತಾಗಿದೆ. ಕಳೆದ ಎರಡು ಸುತ್ತಿನ ಪಂದ್ಯಗಳಲ್ಲಿ ಆಡದೇ ಇದ್ದ ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಕೇರಳ ವಿರುದ್ಧದ ಪಂದ್ಯದಲ್ಲಿ ಗುಜರಾತ್‌ ತಂಡದಲ್ಲಿ ಆಡಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು