ಸೋಮವಾರ, ಮೇ 17, 2021
27 °C

IPL 2021 | ಇಶಾಂತ್‌ ಶರ್ಮಾ ಹಿಮ್ಮಡಿ ಗಾಯದಿಂದ ಬಳಲುತ್ತಿದ್ದಾರೆ: ರಿಕಿ ಪಾಂಟಿಂಗ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ವೇಗಿ ಇಶಾಂತ್‌ ಶರ್ಮಾ ಅವರು ಹಿಮ್ಮಡಿ ಗಾಯದಿಂದ ಬಳಲುತ್ತಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.

24 ವರ್ಷದ ಇಶಾಂತ್‌, ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

ಇಶಾಂತ್‌ ಅನುಪಸ್ಥಿತಿಯಲ್ಲಿ ಅವೇಶ್‌ ಖಾನ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಅವೇಶ್‌ ಖಾನ್‌ ಎರಡು ಪಂದ್ಯಗಳಲ್ಲಿ ಐದು ವಿಕೆಟ್‌ ಪಡೆದು ಗಮನ ಸೆಳೆದಿದ್ದಾರೆ.

ಕಳೆದ ಐಪಿಎಲ್‌ ಆವೃತ್ತಿಯಲ್ಲಿಯೂ ಇಶಾಂತ್‌, ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಆರಂಭಿಕ ಪಂದ್ಯಗಳಲ್ಲಿ ಮಾತ್ರ ಆಡಿದ್ದರು. ಬಳಿಕ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

ಗುಣಮುಖರಾದ ನಂತರ ಸೈಯದ್ ಮುಷ್ತಾಕ್ ಅಲಿ ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್‌ ವಿರುದ್ಧದ ನಾಲ್ಕು ಟೆಸ್ಟ್‌ ಪಂದ್ಯಗಳಲ್ಲಿ ಆರು ವಿಕೆಟ್‌ ಪಡೆದಿದ್ದರು.

ಈ ಬಾರಿಯ ಐಪಿಎಲ್‌ ಆವೃತ್ತಿಯ ಎರಡನೇ ಪಂದ್ಯದಲ್ಲಿ ಗುರುವಾರ ರಾಜಸ್ಥಾನ ರಾಯಲ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಸೋಲು ಅನುಭವಿಸಿತು.

ಇದನ್ನೂ ಓದಿ... ಬಿಸಿಸಿಐ ಗುತ್ತಿಗೆ ಪ್ರಕಟ: ಅಗ್ರಸ್ಥಾನ ಉಳಿಸಿಕೊಂಡ ಕೊಹ್ಲಿ, ರೋಹಿತ್, ಬೂಮ್ರಾ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು