ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 ವಿಶ್ವಕಪ್‌: ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಉಗ್ರರ ಬೆದರಿಕೆ

Published 30 ಮೇ 2024, 4:10 IST
Last Updated 30 ಮೇ 2024, 4:10 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಐಸ್‌ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಅಮೆರಿಕದ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಸ್‌ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ‘ಲೋನ್‌ ವುಲ್ಫ್‌‘ ಎಂಬ ಸಂಘಟನೆ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ದಿನ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಈ ಬಗ್ಗೆ ವಿಡಿಯೊ ಹೇಳಿಕೆ ಪ್ರಸಾರವಾಗಿದೆ ಎಂದು ಪೊಲೀಸ್‌ ಅಧಿಕಾರಿ ಪ್ಯಾಟ್ರಿಕ್‌ ರೈಡರ್‌ ಹೇಳಿದ್ದಾರೆ.  

ಇದೇ ವೇಳೆ ನಗರದ ಗವರ್ನರ್‌ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್‌ ಮಾಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಲ್ಲಿನ ಐಸೆನೋವಾರ್‌ ಪಾರ್ಕ್‌ನಲ್ಲಿರುವ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜೂನ್‌ 9ರಂದು ಪಂದ್ಯ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT