ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸೀಸ್ ಸರಣಿಗೆ ಭಾರತ ತಂಡ; ಶ್ರೇಯಸ್ ಫಿಟ್ನೆಸ್ ಬಗ್ಗೆ ಆತಂಕ

Published 14 ಸೆಪ್ಟೆಂಬರ್ 2023, 4:08 IST
Last Updated 14 ಸೆಪ್ಟೆಂಬರ್ 2023, 4:08 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇದೇ ವಾರ ಘೋಷಿಸಲಿದೆ.

ಏಕದಿನ ವಿಶ್ವಕಪ್‌ಗೂ ಮೊದಲು ನಡೆಯಲಿರುವ ಕೊನೆಯ ಸರಣಿ ಇದಾಗಿರಲಿದೆ. ಆದರೆ ಬೆನ್ನು ನೋವಿನ ಆತಂಕದಲ್ಲಿರುವ ಶ್ರೇಯಸ್ ಅಯ್ಯರ್ ಸರಣಿಗೆ ಲಭ್ಯರಾಗುವರೇ ಎಂಬುದನ್ನು ಕಾದು ನೋಡಬೇಕಿದೆ.

ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾಗಿ ದೀರ್ಘಕಾಲದಿಂದ ತಂಡದಿಂದ ಹೊರಗುಳಿದಿದ್ದ ಅಯ್ಯರ್, ಸಂಪೂರ್ಣ ಫಿಟ್ ಆದ ಬಳಿಕ ಏಷ್ಯಾ ಕಪ್‌ಗಾಗಿ ತಂಡವನ್ನು ಸೇರಿಕೊಂಡಿದ್ದರು.

ಆದರೆ ಸೂಪರ್ 4 ಹಂತದಲ್ಲಿ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ಆಡಿರಲಿಲ್ಲ. ಈಗ ನಾಳೆ (ಶುಕ್ರವಾರ) ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡುವರೇ ಎಂಬುದು ತಿಳಿದು ಬಂದಿಲ್ಲ.

ಮುಂಬರುವ ಏಕದಿನ ವಿಶ್ವಕಪ್‌ಗೆ ಬಿಸಿಸಿಐ ಈಗಾಗಲೇ ತಂಡ ಪ್ರಕಟಿಸಿದ್ದು, ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT