ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ ಸೋತರೂ, ಯುವ ಬ್ಯಾಟರ್ ಜೇಕಬ್ ಬೆಥೆಲ್ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನಸೆಳೆದಿದ್ದರು.

ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ಜೇಕಬ್ ಬೆಥೆಲ್ ಅವರಿಗೆ ಪ್ರಮುಖ ಟೂರ್ನಿಯೊಂದರಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಒಲಿದು ಬಂದಿದೆ. ಮುಂಬರುವ ದಿ ಹಂಡ್ರೆಡ್ ಲೀಗ್ನಲ್ಲಿ ಬರ್ಮಿಂಗ್ಹ್ಯಾಮ್ ಫೀನಿಕ್ಸ್ ತಂಡವನ್ನು ಜೇಕಬ್ ಬೆಥೆಲ್ ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

21 ವರ್ಷದ ಬೆಥೆಲ್ ಅವರು 2025ರಲ್ಲಿ ಮುಕ್ತಾಯಗೊಂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹ್ಯಾರಿ ಬ್ರೂಕ್ ಬದಲು ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದರು. ಆ ಮೂಲಕ ಇಂಗ್ಲೆಂಡ್ ತಂಡದ ಅತ್ಯಂತ ಕಿರಿಯ ನಾಯಕ ಎಂಬ ಸಾಧನೆ ಮಾಡಿದ್ದರು.

ಮಾರ್ಚ್ 11ರಂದು ನಡೆಯಲಿರುವ ದಿ ಹಂಡ್ರೆಡ್ ಲೀಗ್ನ ಹರಾಜಿಗೆ ಮುನ್ನಾ ಬೆಥೆಲ್ ಅವರನ್ನು ಫೀನಿಕ್ಸ್ ಫ್ರಾಂಚೈಸಿಯು ₹4.21 ಕೋಟಿ ತಂಡಕ್ಕೆ ಸೇರಿಸಿಕೊಂಡಿದೆ. ಮಾತ್ರವಲ್ಲ, ಲಿಯಾಮ್ ಲಿವಿಂಗ್ಸ್ಟೋನ್ ಬದಲು ಬೆಥೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಂಡ ಘೋಷಿಸಿದೆ.

ಬೆಥೆಲ್ ಅವರು 2025ರಲ್ಲಿ ಮುಕ್ತಾಯಗೊಂಡ ಐರ್ಲೆಂಡ್ ವಿರುದ್ಧದ ಸರಣಿಯಿಂದಲೂ ಅವರು ಇಂಗ್ಲೆಂಡ್ ತಂಡದ ಉಪನಾಯಕರಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ T20 ವಿಶ್ವಕಪ್ನಲ್ಲಿಯೂ ಅವರು ಇಂಗ್ಲೆಂಡ್ ತಂಡದ ಉಪನಾಯಕರಾಗಿದ್ದರು.

ನಾಯಕತ್ವದ ಕುರಿತು ಮಾತನಾಡಿರುವ ಬೆಥೆಲ್, ‘ಬರ್ಮಿಂಗ್ಹ್ಯಾಮ್ ಫೀನಿಕ್ಸ್ ತಂಡದ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಈ ತಂಡವನ್ನು ಮುನ್ನಡೆಸುವುದು ದೊಡ್ಡ ಗೌರವ ಎಂದು ಭಾವಿಸಿದ್ದೇನೆ. ಕಳೆದ ವರ್ಷ ಇಂಗ್ಲೆಂಡ್ ತಂಡದ ನಾಯಕತ್ವದ ಅನುಭವದ ಬಳಿಕ, ನನಗೆ ಸಿಕ್ಕ ಅತ್ಯಂತ ದೊಡ್ಡ ಜವಾಬ್ದಾರಿ ಇದು. ಸಿಕ್ಕಿರುವ ಜವಾಬ್ದಾರಿಯನ್ನು ಬಳಸಿಕೊಂಡು ತಂಡದಿಂದ ಹೇಗೆ ಉತ್ತಮ ಪ್ರದರ್ಶನ ಹೊರತರಬೇಕು ಎಂಬುದರ ಕುರಿತು ಯೋಚಿಸುತ್ತೇನೆ’ ಎಂದಿರುವುದಾಗಿ ಕ್ರಿಕ್ ಇನ್ಫೋ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.