ICC Test Rankings: ಜಡೇಜ ನಂ.1 ಆಲ್ರೌಂಡರ್; ಕೊಹ್ಲಿ, ಪಂತ್ ಬಡ್ತಿ

ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಆಲ್ರೌಂಡರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ರವೀಂದ್ರ ಜಡೇಜ ನಂ.1 ಸ್ಥಾನ ಅಲಂಕರಿಸಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆದ ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಅಜೇಯ 175 ರನ್ ಹಾಗೂ ಪ್ರಥಮ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಸೇರಿದಂತೆ ಪಂದ್ಯದಲ್ಲಿ ಒಂಬತ್ತು ವಿಕೆಟ್ ಕಬಳಿಸಿದ ಜಡೇಜ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಇದರ ಹೊರತಾಗಿ ಟೆಸ್ಟ್ ಬ್ಯಾಟಿಂಗ್ ವಿಭಾಗದಲ್ಲಿ 17 ಸ್ಥಾನ ಬಡ್ತಿ ಕಂಡಿರುವ ಜಡೇಜ 37ನೇ ಮತ್ತು ಬೌಲಿಂಗ್ ವಿಭಾಗದಲ್ಲಿ ಮೂರು ಸ್ಥಾನ ಬಡ್ತಿ ಪಡೆದು 17ನೇ ಸ್ಥಾನಕ್ಕೆ ತಲುಪಿದ್ದಾರೆ.
ಇದನ್ನೂ ಓದಿ: ಅನಿಲ್ ಕುಂಬ್ಳೆ ಮಗ ಮಾಯಸ್ ಅವರ ‘ಸಫಾರಿ ಸಾಗಾ’ ಕೃತಿ ಲೋಕಾರ್ಪಣೆ: ಏನು ವಿಶೇಷ?
ಆಲ್ರೌಂಡರ್ಗಳ ಪಟ್ಟಿಯಲ್ಲಿ ಎರಡು ಸ್ಥಾನಗಳ ಬಡ್ತಿ ಪಡೆದಿರುವ ಜಡೇಜ, ವೆಸ್ಟ್ ಇಂಡೀಸ್ನ ಜೇಸನ್ ಹೋಲ್ಡರ್ ಹಾಗೂ ಭಾರತದವರೇ ಆದ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
ಅತ್ತ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಹಾಗೂ ಒಟ್ಟು ಆರು ವಿಕೆಟ್ ಕಬಳಿಸಿರುವ ಹೊರತಾಗಿಯೂ ಒಂದು ಸ್ಥಾನ ಕುಸಿತ ಕಂಡಿರುವ ಅಶ್ವಿನ್, ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.
— ICC (@ICC) March 9, 2022
ಕೊಹ್ಲಿ, ಪಂತ್ಗೆ ಬಡ್ತಿ; ರೋಹಿತ್ಗೆ ಹಿನ್ನಡೆ
ಈ ನಡುವೆ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡು ಸ್ಥಾನಗಳ ಬಡ್ತಿ ಪಡೆದು ಐದಕ್ಕೆ ತಲುಪಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ.
ವಿಕೆಟ್ ಕೀಪರ್ ರಿಷಬ್ ಪಂತ್ ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟಿದ್ದಾರೆ.
ಅಶ್ವಿನ್, ಜೂಮ್ರಾ ಸ್ಥಿರ...
ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (2) ಹಾಗೂ ಜಸ್ಪ್ರೀತ್ ಬೂಮ್ರಾ (10) ಕ್ರಮಾಂಕಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಈ ವಿಭಾಗವನ್ನು ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮುನ್ನಡೆಸುತ್ತಿದ್ದಾರೆ.
Jadeja reaches the summit 👑
Kohli, Pant move up ⬆️Some big movements in the latest update to the @MRFWorldwide ICC Men's Test Player rankings 📈
Details 👉 https://t.co/BjiD5Avxhk pic.twitter.com/U4dfnrmLmE
— ICC (@ICC) March 9, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.