ಭಾನುವಾರ, ನವೆಂಬರ್ 27, 2022
23 °C

ಬಾಂಗ್ಲಾದೇಶ ಕ್ರಿಕೆಟ್‌ ಸರಣಿ: ಜಡೇಜ ಅಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಆಲ್‌ರೌಂಡರ್ ರವೀಂದ್ರ ಜಡೇಜ ಅವರನ್ನು ಮುಂದಿನ ತಿಂಗಳು ನಡೆಯಲಿರುವ ಬಾಂಗ್ಲಾದೇಶ ಎದುರಿನ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.

 ಕೆಲವು ತಿಂಗಳುಗಳ ಹಿಂದೆ ಅವರ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿನ್ನೂ ಪೂರ್ಣಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಆದ್ದರಿಂದ ಅವರನ್ನು ಆಯ್ಕೆ ಪರಿಗಣಿಸಿಲ್ಲ. ಬೆನ್ನುನೋವಿನಿಂದ ಬಳಲಿರುವ ಯಶ್ ದಯಾಳ್ ಅವರನ್ನೂ ಆಯ್ಕೆ ಮಾಡಿಲ್ಲ.

ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಏಕದಿನ ಸರಣಿ ಮತ್ತು ಬಾಂಗ್ಲಾದೇಶ ಏಕದಿನ ಸರಣಿಯಲ್ಲಿ ಆಡುವ ಭಾರತ ತಂಡಗಳನ್ನು ಬುಧವಾರ ಬಿಸಿಸಿಐ ಪ್ರಕಟಿಸಿದೆ.

ನ್ಯೂಜಿಲೆಂಡ್‌ನಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸುವರು. ಬಾಂಗ್ಲಾ ಸರಣಿಗೆ ರೋಹಿತ್ ತಂಡಕ್ಕೆ ಮರಳುವರು.ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಕೂಡ ಮರಳಲಿದ್ದಾರೆ. ಇದೇ ಸಂದರ್ಭದಲ್ಲಿ ಭಾರತ ಎ ತಂಡವನ್ನೂ ಆಯ್ಕೆ ಮಾಡಲಾಗಿದೆ. ಅಭಿಮನ್ಯು ಈಶ್ವರನ್ ನಾಯಕತ್ವ ವಹಿಸುವರು.

ಭಾರತ ತಂಡಗಳು:

ನ್ಯೂಜಿಲೆಂಡ್ ಏಕದಿನ ಸರಣಿಗೆ:ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯುಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ/ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್,  ಆರ್ಷದೀಪ್ ಸಿಂಗ್, ದೀಪಕ್ ಚಾಹರ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು