ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್: ರವೀಂದ್ರ ಜಡೇಜ ಅಗ್ರ ಆಲ್‌ರೌಂಡರ್

ಎರಡನೇ ಸ್ಥಾನಕ್ಕಿಳಿದ ಜೇಸನ್ ಹೋಲ್ಡರ್
Last Updated 23 ಜೂನ್ 2021, 14:32 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ರವೀಂದ್ರ ಜಡೇಜ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಟೆಸ್ಟ್ ಆಲ್‌ರೌಂಡರ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.

ಬುಧವಾರ ಪ್ರಕಟವಾದ ಪಟ್ಟಿಯಲ್ಲಿ ಎಡಗೈ ಆಲ್‌ರೌಂಡರ್ ಜಡೇಜ ಅವರು ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ (384) ಅವರಿಗಿಂತ ಎರಡು ಅಂಕಗಳನ್ನು ಹೆಚ್ಚು ಗಳಿಸಿ ಮೊದಲ ಸ್ಥಾನವೇರಿದರು. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ (377) ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ಆರ್. ಅಶ್ವಿನ್ 353 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದ ಶಕೀಬ್ ಅಲ್ ಹಸನ್ (338) ನಂತರದ ಸ್ಥಾನದಲ್ಲಿದ್ದಾರೆ.

ಅಶ್ವಿನ್ ಬೌಲಿಂಗ್ ವಿಭಾಗದಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಅವರ ಖಾತೆಯಲ್ಲಿ ಒಟ್ಟು 850 ಅಂಕಗಳು ಇವೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ (908) ಮೊದಲ ಹಾಗೂ ನ್ಯೂಜಿಲೆಂಡ್‌ನ ಟಿಮ್ ಸೌಥಿ ಮೂರನೇ ಸ್ಥಾನದಲ್ಲಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ ಉಳಿಸಿಕೊಂಡಿದ್ದಾರೆ. ಅವರ ಖಾತೆಯಲ್ಲಿ 814 ಅಂಕಗಳು ಇವೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ (891) ಅಗ್ರಸ್ಥಾನದಲ್ಲಿದ್ದಾರೆ. ಕಿವೀಸ್ ಬಳಗದ ನಾಯಕ ಕೇನ್ ವಿಲಿಯಮ್ಸನ್ (886) ಮತ್ತು ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ (878) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ (797) ಐದನೇ ಸ್ಥಾನದಲ್ಲಿದ್ದಾರೆ. ಭಾರತದ ರಿಷಭ್ ಪಂತ್ ಮತ್ತು ರೋಹಿತ್ ಶರ್ಮಾ 747 ಪಾಯಿಂಟ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT