ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG 2nd Test: ಜಡೇಜ, ಶಮಿ ಅಲಭ್ಯ

Published 2 ಫೆಬ್ರುವರಿ 2024, 23:30 IST
Last Updated 2 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ವಿಶಾಖಪಟ್ಟಣ: ಭಾರತ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜ ಅವರು ಇಂಗ್ಲೆಂಡ್ ವಿರುದ್ದದ ಸರಣಿಯ ಉಳಿದೆಲ್ಲ ಪಂದ್ಯಗಳಿಗೂ ಅಲಭ್ಯರಾಗುವ ಸಾಧ್ಯತೆ ಇದೆ.

ಹೈದರಾಬಾದಿನಲ್ಲಿ ಈಚೆಗೆ ನಡೆದ ಇಂಗ್ಲೆಂಡ್ ಎದುರಿನ ಮೊದಲ ಪಂದ್ಯದಲ್ಲಿ ಜಡೇಜ ರನ್‌ ಗಳಿಸುವ ಓಡುವಾಗ ಸ್ನಾಯುಸೆಳೆತ ಅನುಭವಿಸಿದ್ದರು. ಇದರಿಂದಾಗಿ ಅವರು ಎರಡನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆಂದು ತಿಳಿಸಲಾಗಿತ್ತು. ಅವರ ಗಾಯ ವಾಸಿಯಾಗಲು ದೀರ್ಘ ಸಮಯದ ಅಗತ್ಯವಿರುವುದರಿಂದ ಸರಣಿಯ ಉಳಿದ ಮೂರು ಪಂದ್ಯಗಳಲ್ಲಿ ಆಡುವ ತಂಡದಿಂದ ಕೈಬಿಡುವ ಸಾಧ್ಯತೆ ಇದೆ.

ವೇಗಿ ಮೊಹಮ್ಮದ್ ಶಮಿ ಕೂಡ ಗಾಯದಿಂದಾಗಿ ಬಹಳ ದಿನಗಳಿಂದ ತಂಡದಿಂದ ಹೊರಗಿದ್ದಾರೆ. ಈ ಸರಣಿಯ ಉಳಿದ ಪಂದ್ಯಕ್ಕೂ ಅವರು ಅಲಭ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT