T20 WC: ಅಫ್ಗನ್ ವಿರುದ್ಧದ ಪಂದ್ಯದಲ್ಲಿ ಚಾಹಲ್ ದಾಖಲೆ ಮುರಿಯುತ್ತಾರಾ ಬೂಮ್ರಾ?

ನವದೆಹಲಿ: ಟಿ–20 ವಿಶ್ವಕಪ್‌ನಲ್ಲಿ ಅಫ್ಗಾನಿಸ್ತಾನದ ವಿರುದ್ಧ ಇಂದು (ಬುಧವಾರ) ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲರ್ ಜಸ್‌ಪ್ರೀತ್ ಬೂಮ್ರಾ ವಿಶಿಷ್ಟ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಅ.24ರಂದು ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಈ ಪಂದ್ಯದಲ್ಲಿ ಪಾಕ್ 10 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು.
ಅ.31 ರಂದು ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಜಸ್‌ಪ್ರೀತ್ ಬೂಮ್ರಾ ಎರಡು ವಿಕೆಟ್ ಪಡೆದಿದ್ದರು. ಆದರೂ ಭಾರತ ತಂಡ ಸೋಲು ಕಂಡಿತ್ತು.
ಇಂದು ಅಫ್ಗಾನಿಸ್ತಾನದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಒತ್ತಡದಲ್ಲಿದೆ. ಜತಗೆ ಬೌಲಿಂಗ್ ವಿಭಾಗದಲ್ಲಿ ಬೂಮ್ರಾ ಅವರ ಮೇಲೆ ಹೆಚ್ಚು ನಿರೀಕ್ಷೆ ಇಡಲಾಗಿದೆ. ಇವತ್ತಿನ ಪಂದ್ಯದಲ್ಲಿ ಬೂಮ್ರಾ ಮೂರು ವಿಕೆಟ್ ಪಡೆದರೆ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.
ಬುಮ್ರಾ ಈವರೆಗೆ ಆಡಿರುವ 51 ಪಂದ್ಯಗಳಲ್ಲಿ 61 ವಿಕೆಟ್ ಕಬಳಿಸಿದ್ದಾರೆ. ಇತ್ತ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಚಾಹಲ್ 49 ಪಂದ್ಯಗಳಲ್ಲಿ 63 ವಿಕೆಟ್ ಪಡೆದಿದ್ದಾರೆ.
ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಭಾರತ ತಂಡ ಉಳಿದಿರುವ ಮೂರು ಪಂದ್ಯಗಳಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಜಯಿಸುವ ಒತ್ತಡದಲ್ಲಿದೆ.
ಇದನ್ನೂ ಓದಿ... ಟಿ20 ವಿಶ್ವಕಪ್: ವಿರಾಟ್ ಪಡೆಗೆ ಛಲದಾಟದ ಅಫ್ಗನ್ ಸವಾಲು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.