ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪಿಲ್ ದೇವ್ ದಾಖಲೆ ಮುರಿದ ಬೂಮ್ರಾ; ಟೆಸ್ಟ್‌ನಲ್ಲಿ 100 ವಿಕೆಟ್ ಸಾಧನೆ

Last Updated 6 ಸೆಪ್ಟೆಂಬರ್ 2021, 15:40 IST
ಅಕ್ಷರ ಗಾತ್ರ

ಲಂಡನ್: ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ದೀರ್ಘ ಪ್ರಕಾರದ ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 100 ವಿಕೆಟ್ ಪಡೆದ ಭಾರತೀಯ ವೇಗದ ಬೌಲರ್ ಎಂಬ ಖ್ಯಾತಿಗೆ ಬೂಮ್ರಾ ಪಾತ್ರರಾಗಿದ್ದಾರೆ.

ಕೇವಲ 24ನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ 100 ವಿಕೆಟ್‌ಗಳ ಮೈಲುಗಲ್ಲು ತಲುಪಿದ್ದಾರೆ.

ಈ ಮೂಲಕ ಮಾಜಿ ದಿಗ್ಗಜ ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ. ಕಪಿಲ್ 25 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT