ಭಾನುವಾರ, ನವೆಂಬರ್ 27, 2022
26 °C

ICC T20 World Cup | ಗಾಯದ ಸಮಸ್ಯೆ; ಜಸ್‌ಪ್ರೀತ್ ಬೂಮ್ರಾ ಹೊರಕ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ. 

ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿರುವ ಪಿಟಿಐ, ಬೆನ್ನುಮೂಳೆಯ ಸ್ಟ್ರೆಸ್ ಫ್ರಾಕ್ಚರ್ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬೂಮ್ರಾ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ. 

ಇದರೊಂದಿಗೆ ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆ ಎದುರಾಗಿದೆ. ಇತ್ತೀಚೆಗಷ್ಟೇ ಗಾಯದಿಂದಾಗಿ ಆಲ್‌ರೌಂಡರ್ ರವೀಂದ್ರ ಜಡೇಜ ಸೇವೆಯಿಂದಲೂ ಟೀಮ್ ಇಂಡಿಯಾ ವಂಚಿತವಾಗಿತ್ತು. 

ಈಗ ಜಸ್‌ಪ್ರೀತ್ ಬೂಮ್ರಾ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಬೂಮ್ರಾ ಅಲಭ್ಯರಾಗಲಿದ್ದಾರೆ. ಗುರುವಾರ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲೂ ಆಡಿರಲಿಲ್ಲ.

ಬೂಮ್ರಾ ಗಾಯದ ಸಮಸ್ಯೆ ಗಂಭೀರವಾಗಿದ್ದು, ಕನಿಷ್ಠ ಆರು ತಿಂಗಳುಗಳ ವಿಶ್ರಾಂತಿ ಬೇಕಾಗಿದೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು