ಮಂಗಳವಾರ, ಏಪ್ರಿಲ್ 20, 2021
31 °C

ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಏಷ್ಯನ್ ಕ್ರಿಕೆಟ್ ಸಮಿತಿಯ (ಎಸಿಸಿ) ಅಧ್ಯಕ್ಷರಾಗಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು. 32 ವರ್ಷದ ಶಾ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಮುಖ್ಯಸ್ಥ ನಜ್ಮುಲ್ ಹಸನ್ ಪಪೋನ್ ಅವರನ್ನು ಹಿಂದಿಕ್ಕಿದ್ದಾರೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಲ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಏಷ್ಯಾ ಕಪ್‌ ಟೂರ್ನಿ ಆಯೋಜಿಸುವಲ್ಲಿ ಏಷ್ಯನ್ ಕ್ರಿಕೆಟ್ ಸಮಿತಿ ಪ್ರಮುಖ ಪಾತ್ರ ವಹಿಸುತ್ತದೆ. ಕೋವಿಡ್–19ರ ಕಾರಣದಿಂದ 2020ರ ಏಷ್ಯಾಕಪ್ ಟೂರ್ನಿಯನ್ನು ಮುಂದೂಡಲಾಗಿದ್ದು ಈ ವರ್ಷದ ಜೂನ್‌ನಲ್ಲಿ ನಡೆಯಲಿದೆ. ಪಾಕಿಸ್ತಾನದಲ್ಲಿ ಟೂರ್ನಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಇನ್ನು ಶ್ರೀಲಂಕಾ ಅಥವಾ ಬಾಂಗ್ಲಾದೇಶದಲ್ಲಿ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು