ಹ್ಯಾಮಿಲ್ಟನ್: ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರು ವಿಶ್ವಕಪ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ಒಂದು ವಿಕೆಟ್ ಪಡೆಯುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಗೋಸ್ವಾಮಿ ಅವರು ಅನಿಸಾ ಮೊಹಮ್ಮದ್ ಅವರನ್ನು ಔಟ್ ಮಾಡಿದರು. ವಿಶ್ವಕಪ್‌ನಲ್ಲಿ ಗೋಸ್ವಾಮಿ ಈವರೆಗೆ 40 ವಿಕೆಟ್‌ಗಳನ್ನು ಪಡೆದಿದ್ದಾರೆ. 39 ವಿಕೆಟ್ ಪಡೆದಿದ್ದ ಆಸ್ಟ್ರೇಲಿಯಾದ ಸ್ಪಿನ್ನರ್ ಲಿನ್ ಫುಲ್ಸ್‌ಟನ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 155 ರನ್ ಅಂತರದಿಂದ ಗೆಲುವು ಸಾಧಿಸಿತು.

ಸೆಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಸ್ಮೃತಿ ಮಂದಾನ ಹಾಗೂ ಹರ್ಮನ್‌ಪ್ರೀತ್ ಕೌರ್ ಗಳಿಸಿದ ಅಮೋಘ ಶತಕಗಳ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿತ್ತು.

ಈ ಬೃಹತ್ ಗುರಿ ಬೆನ್ನತ್ತಿದ ವಿಂಡೀಸ್ ತಂಡ 40.3 ಓವರ್‌ಗಳಲ್ಲಿ 162 ರನ್ ಗಳಿಸಿ ಸೋಲು ಅನುಭವಿಸಿತು.

ಈ ಬಾರಿಯ ವಿಶ್ವಕಪ್‌ನಲ್ಲಿ ಜೂಲನ್ ಅವರ ಬೌಲಿಂಗ್ ಅದ್ಭುತವಾಗಿದ್ದು, ಆಡಿದ ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ.

ಓದಿ...

ICC Womens World Cup: ವಿಂಡೀಸ್ ಎದುರು ಜಯ; ಪಾಯಿಂಟ್ ಪಟ್ಟಿಯಲ್ಲಿ ಭಾರತ ನಂ.1

ಎಂಥ ಅದ್ಭುತ ಫೋಟೊ...: ಭಗವಂತ ಮಾನ್ರನ್ನು ಅಭಿನಂದಿಸಿದ ಹರ್ಭಜನ್ ಸಿಂಗ್

ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ ಸಮಂತಾ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.