ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಚಿಕಿತ್ಸೆ: ಐಪಿಎಲ್‌ಗೆ ರಿಚರ್ಡ್ಸನ್‌ ಇಲ್ಲ

Last Updated 11 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಸಿಡ್ನಿ: ಆಸ್ಟ್ರೇಲಿಯಾದ ವೇಗಿ ಜಾಯ್ ರಿಚರ್ಡ್‌ಸನ್‌ ಅವರು ಈ ಬಾರಿ ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಎಪಿಎಲ್‌) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವುದಿಲ್ಲ.

ಮಂಡಿರಜ್ಜು ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಟೂರ್ನಿಯಲ್ಲಿ ಆಡುತ್ತಿಲ್ಲ. ಮಾರ್ಚ್‌ 31ರಂದು ಆರಂಭವಾಗಲಿರುವ ಟೂರ್ನಿಯಲ್ಲಿ ಅವರು ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿಯಬೇಕಿತ್ತು.

ಆಸ್ಟ್ರೇಲಿಯಾ ತಂಡವು ಮಾರ್ಚ್‌ 17ರಿಂದ ಭಾರತದ ಎದುರು ಆಡಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್‌ ಸರಣಿಯಿಂದ ಈಗಾಗಲೇ ಅವರು ಹೊರಗುಳಿದಿದ್ದಾರೆ.

ರಿಚರ್ಡ್ಸನ್ ಅವರು ಆಸ್ಟ್ರೇಲಿಯಾ ಪರ ಮೂರು ಟೆಸ್ಟ್, 15 ಏಕದಿನ ಮತ್ತು 18 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT