ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ನ ಭಾನುವಾರ ಆರಂಭವಾಗಿರುವ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಯಕ ರಜತ್ ಪಾಟಿದಾರ್ ಇಲ್ಲದೆ ಕಣಕ್ಕಿಳಿದಿದೆ. ಅವರ ಬದಲು ಜಿತೇಶ್ ಶರ್ಮಾ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದಾರೆ.

ಟಾಸ್ ಸಂದರ್ಭದಲ್ಲಿ ರಜತ್ ಪಾಟಿದಾರ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರ್ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ, ಪಂಜಾಬ್ ವಿರುದ್ಧ ಆಡಲು ಪಾಟಿದಾರ್ ಸಾಕಷ್ಟು ಫಿಟ್ ಆಗಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ. ಆದರೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಮುಂದಿನ ಪಂದ್ಯದಲ್ಲಿ ಅವರು ಆಡಲಿದ್ದಾರೆ ಎಂದು ಭರವಸೆ ನೀಡಿದ್ದಾರೆ.

‘ರಜತ್ ಪಾಟಿದಾರ್ ಸದ್ಯ ಅಮೋಘ ಲಯದಲ್ಲಿದ್ದಾರೆ. ಅವರು ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ತಂಡದ ಭಾಗವಾಗಿರಲಿದ್ದಾರೆ ಎಂಬ ನಂಬಿಕೆ ಇದೆ’ ಎಂದು ಟಾಸ್ ಸಂದರ್ಭದಲ್ಲಿ ಜಿತೇಶ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಈ ಋತುವಿನಲ್ಲಿ ಆರ್ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ನಾಯಕ ಪಾಟಿದಾರ್, ಆಡಿರುವ 10 ಇನಿಂಗ್ಸ್ಗಳಿಂದ 195 ಸ್ಟ್ರೈಕ್ ರೇಟ್ನಲ್ಲಿ 326 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ಆರ್ಸಿಬಿ ತಂಡವು ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದು, 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.