ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋ ರೂಟ್‌ಗೆ ಐಪಿಎಲ್‌ನಲ್ಲಿ ಆಡುವಾಸೆ

Last Updated 13 ಜನವರಿ 2022, 14:43 IST
ಅಕ್ಷರ ಗಾತ್ರ

ಹೊಬರ್ಟ್: ಇಂಗ್ಲೆಂಡ್‌ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಜೋ ರೂಟ್ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಸಿದ್ಧರಾಗಿದ್ದಾರೆ. ಹರಾಜು ಪ್ರಕ್ರಿಯೆಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ.

ಶ್ರೀಮಂತ ಕ್ರಿಕೆಟ್‌ ಲೀಗ್‌ನಿಂದ ಅವರು ನಾಲ್ಕು ವರ್ಷಗಳಿಂದ ದೂರವುಳಿದಿದ್ದರು. 2018ರ ಹರಾಜಿನಲ್ಲಿ ಅವರನ್ನು ಯಾರೂ ಖರೀದಿಸಿರಲಿಲ್ಲ.

‘ಐಪಿಎಲ್‌ನಲ್ಲಿ ಆಡಲು ಉತ್ಸುಕನಾಗಿದ್ದೇನೆ. ಟೆಸ್ಟ್‌ ಕ್ರಿಕೆಟ್‌ ಆಡಲು ಅಡ್ಡಿಯಾಗದಿದ್ದರೆ ಲೀಗ್‌ನಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುತ್ತೇನೆ. ಟೆಸ್ಟ್ ಕ್ರಿಕೆಟ್‌ ಆಡಲು ಅಡ್ಡಿಯಾಗುವ ಯಾವುದೇ ಸಂಗತಿಯನ್ನೂ ಒಪ್ಪುವುದಿಲ್ಲ’ ಎಂದು ರೂಟ್ ಇಎಸ್‌ಪಿಎನ್‌ಕ್ರಿಕ್‌ಇನ್ಫೋ ಡಾಟ್ ಕಾಮ್ ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಮುಂದಿನ ಐಪಿಎಲ್‌ಗಾಗಿ ಫೆಬ್ರುವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಮೆಗಾ ಹರಾಜು ಪ್ರಕ್ರಿಯೆ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT