‘ಭಾರತ, ಕೀವಿಸ್ ಎದುರಿನ ಪಂದ್ಯಗಳು ನಿರ್ಣಾಯಕ’

ಲಂಡನ್ (ರಾಯಿಟರ್ಸ್): ‘ಭಾರತ ಮತ್ತು ನ್ಯೂಜಿಲೆಂಡ್ ಎದುರಿನ ಪಂದ್ಯಗಳು ನಮ್ಮ ಪಾಲಿಗೆ ಕ್ವಾರ್ಟರ್ ಫೈನಲ್ ಹೋರಾಟಗಳಿದ್ದಂತೆ. ಈ ಎರಡೂ ಹಣಾಹಣಿಗಳಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶಿಸುವುದು ನಮ್ಮ ಗುರಿ’ ಎಂದು ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ತಿಳಿಸಿದ್ದಾರೆ.
ಮಂಗಳವಾರ ನಡೆದಿದ್ದ ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 64ರನ್‌ಗಳಿಂದ ಸೋತಿತ್ತು. ಹೀಗಾಗಿ ತಂಡದ ನಾಲ್ಕರ ಘಟ್ಟದ ಹಾದಿ ಕಠಿಣವಾಗಿದೆ.
‘ಸೆಮಿಫೈನಲ್ ಪ್ರವೇಶಿಸುವ ಸಾಮರ್ಥ್ಯ ನಮಗಿದೆ. ಭಾರತ ಮತ್ತು ನ್ಯೂಜಿಲೆಂಡ್ ಎದುರಿನ ಪಂದ್ಯಗಳಲ್ಲಿ ಗೆದ್ದು ನಾಲ್ಕರ ಘಟ್ಟದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ನಡೆಯುವ ಹಣಾಹಣಿಯಲ್ಲಿ ಎಯೊನ್ ಮಾರ್ಗನ್ ಬಳಗವು ಭಾರತದ ವಿರುದ್ಧ ಆಡಲಿದೆ. ನ್ಯೂಜಿಲೆಂಡ್ ಎದುರಿನ ಪಂದ್ಯ ಜುಲೈ ಮೂರರಂದು ನಿಗದಿಯಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.