ಗುರುವಾರ , ಮೇ 19, 2022
21 °C

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ಜೋ ರೂಟ್ ರಾಜೀನಾಮೆ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಲಂಡನ್: ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಸ್ಥಾನಕ್ಕೆ ಜೋ ರೂಟ್ ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಕೆಲವು ಸರಣಿಗಳಲ್ಲಿ ಇಂಗ್ಲೆಂಡ್ ತಂಡದ ಕಳಪೆ ಪ್ರದರ್ಶನದ ನೈತಿಕ ಹೊಣೆ ಹೊತ್ತುಕೊಂಡಿರುವ ರೂಟ್, ನಾಯಕ ಸ್ಥಾನ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆ್ಯಷಸ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 0-4 ಅಂತರದ ಹೀನಾಯ ಸೋಲಿಗೆ ಒಳಗಾಗಿದ್ದ ಇಂಗ್ಲೆಂಡ್, ಬಳಿಕ ವೆಸ್ಟ್‌ ಇಂಡೀಸ್ ಪ್ರವಾಸದಲ್ಲೂ 0-1 ಅಂತರದ ಸೋಲಿಗೆ ಶರಣಾಗಿತ್ತು.

ಕಳೆದ ಐದು ವರ್ಷಗಳಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡದ ಕಪ್ತಾನಗಿರಿ ವಹಿಸಿರುವ 31 ವರ್ಷದ ರೂಟ್, ಆಂಗ್ಲರ ಪಡೆಯ ಅತ್ಯಂತ ಯಶಸ್ವಿ ನಾಯಕರ ಸಾಲಿನಲ್ಲಿ ಗುರುತಿಸಿದ್ದಾರೆ.

'ಕೆರೆಬಿಯನ್ ಪ್ರವಾಸದಿಂದ ಹಿಂದಿರುಗಿದ ಬಳಿಕ ಈ ಕುರಿತು ಯೋಚಿಸಿ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಸ್ಥಾನವನ್ನು ತೊರೆಯಲು ನಿರ್ಧರಿಸಿದ್ದೇನೆ. ಇದು ನನ್ನ ವೃತ್ತಿ ಜೀವನದ ಅತ್ಯಂತ ಸವಾಲಿನ ನಿರ್ಧಾರವಾಗಿತ್ತು. ನನ್ನ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಚರ್ಚಿಸಿದ್ದೇನೆ. ಇದುವೇ ಸರಿಯಾದ ಸಮಯ ಎಂಬುದು ನನಗೆ ತಿಳಿದಿದೆ' ಎಂದು ಜೋ ರೂಟ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ರೂಟ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

2017ರಲ್ಲಿ ರೂಟ್ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಸ್ಥಾನ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು