ಬುಧವಾರ, ಮಾರ್ಚ್ 29, 2023
31 °C

T20 WC: ಶತಕ ಸಿಡಿಸಿ ವಿಶಿಷ್ಟ ದಾಖಲೆ ಬರೆದ ಜೋಸ್ ಬಟ್ಲರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶಾರ್ಜಾ: ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಶಾರ್ಜಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಟ್ಲರ್ ಸ್ಮರಣೀಯ ಶತಕ ಗಳಿಸಿದರು.

ಇದನ್ನೂ ಓದಿ: 

 

 

 

ಈ ಮೂಲಕ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ ಇಂಗ್ಲೆಂಡ್‌ನ ಮೊತ್ತ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಭಾಜನರಾಗಿದ್ದಾರೆ. ಈ ಹಿಂದೆ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲೂ ಶತಕ ಗಳಿಸಿದ್ದಾರೆ.

 

ಅಂತೆಯೇ 2021ನೇ ಸಾಲಿನ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ಮೊದಲ ಶತಕವೂ ಇದಾಗಿದೆ.

ಲಂಕಾ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್ 67 ಎಸೆತಗಳಲ್ಲಿ ಶತಕ ಗಳಿಸಿದರು. ಇಂಗ್ಲೆಂಡ್ ಇನ್ನಿಂಗ್ಸ್‌ನ ಅಂತಿಮ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಬಟ್ಲರ್ ಮೈಲಿಗಲ್ಲು ತಲುಪಿದರು.

ಬಟ್ಲರ್ ಮನಮೋಹಕ ಇನ್ನಿಂಗ್ಸ್‌ನಲ್ಲಿ ತಲಾ ಆರು ಸಿಕ್ಸರ್ ಹಾಗೂ ಬೌಂಡರಿಗಳು ಸೇರಿದ್ದವು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು