ಶನಿವಾರ, ಡಿಸೆಂಬರ್ 4, 2021
20 °C

ಮೂರನೇ ಟಿ20 ಪಂದ್ಯಕ್ಕೆ ಬಟ್ಲರ್ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸೌತಾಂಪ್ಟನ್: ಆತಿಥೇಯ ಇಂಗ್ಲೆಂಡ್ ತಂಡದ ಆಸ್ಟ್ರೇಲಿಯಾ ಎದುರಿನ ಮೂರನೇ ಟ್ವೆಂಟಿ–20 ಪಂದ್ಯದಲ್ಲಿ ಜೋಸ್ ಬಟ್ಲರ್ ಆಡುವುದಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಸೋಮವಾರ ತಿಳಿಸಿದೆ. 

29 ವರ್ಷದ ಬಟ್ಲರ್ ಭಾನುವಾರ ನಡೆದಿದ್ದ ಎರಡನೇ ಪಂದ್ಯದಲ್ಲಿ ಅಜೇಯ 77 ರನ್ ಗಳಿಸಿ ತಂಡಕ್ಕೆ ಆರು ವಿಕೆಟ್‌ಗಳ ಜಯ ತಂದುಕೊಟ್ಟಿದ್ದರು. ವೈಯಕ್ತಿಕ ಕಾರಣಗಳಿಂದ ಕೊನೆಯ ಪಂದ್ಯದಲ್ಲಿ ಆಡುವುದಿಲ್ಲ. ಪಂದ್ಯ ಮಂಗಳವಾರ ಸೌತಾಂಪ್ಟನ್‌ನಲ್ಲಿ ನಡೆಯಲಿದೆ.

ಪಂದ್ಯ ಆರಂಭ: ರಾತ್ರಿ 10.30 (ಭಾರತೀಯ ಕಾಲಮಾನ)

ನೇರ ಪ್ರಸಾರ: ಸೋನಿ ಸಿಕ್ಸ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.