ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಲ್. ರಾಹುಲ್‌ಗೆ ಕೋವಿಡ್: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಲಭ್ಯ

Last Updated 21 ಜುಲೈ 2022, 16:09 IST
ಅಕ್ಷರ ಗಾತ್ರ

ಮುಂಬೈ: ಭಾರತದ ಬ್ಯಾಟರ್ ಕೆ.ಎಲ್. ರಾಹುಲ್ ಅವರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಇದರಿಂದಾಗಿ ಅವರು ಮುಂಬರಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಅಧ್ಯಕ್ಷ ಸೌರವ್ ಗಂಗೂಲಿ ಈ ವಿಷಯ ತಿಳಿಸಿದರು.

ರಾಹುಲ್ ಈಚೆಗಷ್ಟೇ ಜರ್ಮನಿಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅವರು ಪುನಶ್ಚೇತನ ಮತ್ತು ಆರೈಕೆ ಪಡೆಯುತ್ತಿದ್ದರು. ಅದರಿಂದಾಗಿ ಶುಕ್ರವಾರ ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಆಡದಿರಲು ನಿರ್ಧರಿಸಿದ್ದರು.

ಗುರುವಾರ ರಾಹುಲ್, ಎನ್‌ಸಿಎನಲ್ಲಿ ಲೆವಲ್ ತ್ರಿ ಕೋಚ್ ಸರ್ಟಿಫಿಕೇಷನ್ ಕೋರ್ಸ್‌ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ತೆರಳಿರುವ ಭಾರತ ಮಹಿಳಾ ತಂಡದ ಆಟಗಾರ್ತಿಯೊಬ್ಬರಿಗೆ ಕೂಡ ಕೋವಿಡ್ ಆಗಿದೆ ಎಂದು ಗಂಗೂಲಿ ತಿಳಿಸಿದರು. ಆದರೆ, ಆಟಗಾರ್ತಿಯ ಹೆಸರು ಬಹಿರಂಗಪಡಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT