ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂಬಾಬ್ವೆ ವಿರುದ್ಧದ ಸರಣಿಗೆ ರಾಹುಲ್‌ ಲಭ್ಯ: ನಾಯಕನಾಗಿ ನಿಯೋಜನೆ, ಧವನ್ ಉಪನಾಯಕ 

Last Updated 11 ಆಗಸ್ಟ್ 2022, 16:21 IST
ಅಕ್ಷರ ಗಾತ್ರ

ನವದೆಹಲಿ: ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆಡಲು ಭಾರತದ ಬ್ಯಾಟರ್ ಕೆಎಲ್ ರಾಹುಲ್ ಸಮರ್ಥರಾಗಿದ್ದಾರೆ ಎಂದು ಬಿಸಿಸಿಐ ಹೇಳಿದ್ದು, ಸರಣಿಗೆ ಅವರನ್ನು ನಾಯಕನ್ನನಾಗಿ ನಿಯೋಜಿಸಿದೆ.

ಬಿಸಿಸಿಐ ವೈದ್ಯಕೀಯ ತಂಡವು ಕೆಎಲ್ ರಾಹುಲ್ ಅವರ ಫಿಟ್‌ನೆಸ್‌ ಮೌಲ್ಯಮಾಪನ ಮಾಡಿದೆ. ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಅನುಮತಿಸಿದೆ. ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ. ಶಿಖರ್ ಧವನ್ ಅವರನ್ನು ಉಪನಾಯಕರನ್ನಾಗಿ ಮಾಡಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಏಕದಿನ ಸರಣಿ ಆಗಸ್ಟ್ 18 ರಂದು ಜಿಂಬಾಬ್ವೆಯ ಹರಾರೆಯಲ್ಲಿ ಆರಂಭವಾಗಲಿದ್ದು, ಕೊನೆಯ ಏಕದಿನ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ.

ಸರಣಿಗೆ ಆಯ್ಕೆಯಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ರಾಹುಲ್‌, ಶೀಘ್ರದಲ್ಲೇ ರಾಷ್ಟ್ರೀಯ ತಂಡಕ್ಕೆ ಮರಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್‌ ಹಾಕಿದ್ದರು.

ಇನ್ನೊಂದೆಡೆ, ಜಿಂಬಾಬ್ವೆ ತಂಡವು ಬ್ಯಾಟರ್ ರೆಗಿಸ್ ಚಕಾಬ್ವಾ ಅವರನ್ನು ತಂಡದ ನಾಯಕನನ್ನಾಗಿ ನಿಯೋಜಿಸಿದೆ.

3 ಏಕದಿನ ಪಂದ್ಯಗಳಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕವಾಡ್‌, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್ , ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT