ಶನಿವಾರ, ಜನವರಿ 18, 2020
19 °C

ದಕ್ಷಿಣ ಆಫ್ರಿಕಾ ತಂಡಕ್ಕೆ ಜಾಕ್‌ ಕಾಲಿಸ್‌ ಬ್ಯಾಟಿಂಗ್‌ ಸಲಹೆಗಾರ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್‌: ಅನುಭವಿ ಆಲ್‌ರೌಂಡರ್‌ ಜಾಕ್‌ ಕಾಲಿಸ್‌ ಅವರು ಬುಧವಾರ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ಸಹೆಗಾರರಾಗಿ ನೇಮಕವಾಗಿದ್ದಾರೆ. ಈ ಮೂಲಕ ಹರಿಣ ನಾಡಿನ ಪಡೆಯು ತರಬೇತುದಾರ ಸಿಬ್ಬಂದಿಯನ್ನು ಬಲಗೊಳಿಸುವ ಪ್ರಕ್ರಿಯೆ ಮುಂದುವರಿಸಿದೆ.

ಡಿಸೆಂಬರ್‌ 26ರಿಂದ ಸೆಂಚೂರಿಯನ್‌ನಲ್ಲಿ ಇಂಗ್ಲೆಂಡ್‌ ಎದುರು ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಡಲಿದೆ.

44 ವರ್ಷದ ಕಾಲಿಸ್‌, ದಕ್ಷಿಣ ಆಫ್ರಿಕಾ ಪರ ಅತಿ ಹೆಚ್ಚು ಟೆಸ್ಟ್‌ ಪಂದ್ಯಗಳನ್ನು ಆಡಿರುವ ಆಟಗಾರ. 165 ಟೆಸ್ಟ್‌ ಪಂದ್ಯಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ವಿಶ್ವ ಇಲೆವನ್‌ ಪರ ಒಂದು ಪಂದ್ಯವಾಡಿದ್ದಾರೆ.

ಇಂಗ್ಲೆಂಡ್‌ ಎದುರಿನ ಟೆಸ್ಟ್‌ ಸರಣಿಗೆ ಪೂರ್ವಭಾವಿಯಾಗಿ ನಡೆಯುವ ಶಿಬಿರದಲ್ಲಿ ಕಾಲಿಸ್‌ ತಂಡ ಸೇರಿಕೊಳ್ಳಲಿದ್ದಾರೆ ಎಂದು ಕ್ರಿಕೆಟ್‌ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಹೇಳಿದೆ.

2013ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ಕಾಲಿಸ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ 55.37ರ ಸರಾಸರಿಯಲ್ಲಿ 13,289 ರನ್‌ ಕಲೆ ಹಾಕಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು