ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಮೊದಲ ಪಂದ್ಯದಲ್ಲೇ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 15 ಎಸೆತಗಳಿಗೆ ಅರ್ಧಶತಕ ಸಿಡಿಸಿರುವ ರಾಜಸ್ಥಾನ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಕುರಿತು ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ನಡುವೆ, ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಕಮ್ರಾನ್ ಅಕ್ಮಲ್ ಕೂಡ ಅವರ ಆಟಕ್ಕೆ ತಲೆಬಾಗಿದ್ದಾರೆ.

ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಛಾಪು ಮೂಡಿಸಲು ಸಿದ್ಧರಾಗಿದ್ದಾರೆ. ಐಪಿಎಲ್ ಆವೃತ್ತಿ ಮುಗಿಯುತ್ತಿದ್ದಂತೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಕಮ್ರಾನ್ ಅಕ್ಮಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಮಲ್ ಯೂಟ್ಯೂಬ್ ಗೇಮ್ಪ್ಲಾನ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಡಿರುವ 8 ಐಪಿಎಲ್ ಪಂದ್ಯಗಳಲ್ಲಿ, ವೈಭವ್ ಅವರು ಅನೇಕ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅವರು ಈಗಾಗಲೇ ವೇಗದ ಶತಕ ಗಳಿಸಿದ್ದಾರೆ. ಅರ್ಧಶತಕ ಬಾರಿಸಿದ್ದಾರೆ. ಐಪಿಎಲ್ ಪ್ರದರ್ಶನದಿಂದಾಗಿ ಅವರಿಗೆ ಮುಂಬರುವ ದಿನಗಳಲ್ಲಿ ಭಾರತದ ಪರ ಆಡಲು ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಉತ್ತಮ ಆಟಗಾರನಾಗುವ ಸಾಧ್ಯತೆ ಇದೆ’ ಎಂದಿದ್ದಾರೆ.

‘ವೈಭವ್ ಆಡುವಾಗ ಅಡುವ ಮನಸ್ಥಿತಿ, ಆಟದ ಮೇಲಿನ ಜ್ಞಾನ ಮತ್ತು ಅವರು ಆಡುವ ರೀತಿ ನೋಡಿದರೆ, ಇಷ್ಟು ಚಿಕ್ಕ ವಯಸ್ಸಿಗೆ ಆತನ ಆಟ ನಿಜಕ್ಕೂ ಶ್ಲಾಘನೀಯ. ಗುರಿ ಎಷ್ಟೇ ಇದ್ದರೂ ಅವರ ಆಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದಿದ್ದಾರೆ.

ಅಂತಿಮವಾಗಿ, ‘15ನೇ ವಯಸ್ಸಿನಲ್ಲಿ ಬೌಲರ್ಗಳ ಮೇಲೆ ಈ ರೀತಿಯಾಗಿ ಸವಾರಿ ಮಾಡುವ ವೈಭವ್ ಅವರು 25 ವರ್ಷದವರಾದಾಗ ಬೌಲರ್ಗಳ ಕಥೆ ಏನಾಗಬಹುದು ಎಂಬುದನ್ನು ನೆನೆಸಿಕೊಂಡರೆ ಭಯವಾಗುತ್ತೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.