ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಣಗಂಟಿನ ಗಾಯ; ಕೇನ್ ವಿಲಿಯಮ್ಸನ್‌ಗೆ ಐಪಿಎಲ್‌ಗೆ ಮರಳುವ ವಿಶ್ವಾಸ

Last Updated 12 ಫೆಬ್ರುವರಿ 2022, 3:25 IST
ಅಕ್ಷರ ಗಾತ್ರ

ಆಕ್ಲೆಂಡ್: ಮೊಣಗಂಟಿನ ಗಾಯದಿಂದ ಶೀಘ್ರದಲ್ಲಿ ಚೇತರಿಸಿಕೊಂಡು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ವಿಶ್ವಾಸವನ್ನು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ವ್ಯಕ್ತಪಡಿಸಿದ್ದಾರೆ.

31 ವರ್ಷದ ಕೇನ್ ಅವರು ಮೊಣಕೈ ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾರೆ. ಅದರಿಂದಾಗಿ ಕಳೆದ ಎರಡು ಸರಣಿಗಳಲ್ಲಿ ಅವರಿಗೆ ಆಡಲು ಸಾಧ್ಯವಾಗಿಲ್ಲ. ಮುಂದಿನ ತಿಂಗಳಿನವರೆಗೆ ಸಂಪೂರ್ಣವಾಗಿ ಗುಣಮುಖರಾಗುವ ವಿಶ್ವಾಸದಲ್ಲಿದ್ದಾರೆ.

‘ಮಾರ್ಚ್‌ನಲ್ಲಿ ಐಪಿಎಲ್ ಆರಂಭವಾಗಲಿದೆ. ಅದರಲ್ಲಿ ಆಡಲು ಉತ್ಸುಕನಾಗಿದ್ದೇನೆ. ಟಿ20 ಮಾದರಿಯಲ್ಲಿ ಮತ್ತಷ್ಟು ಉತ್ತಮವಾಗಿ ಬೆಳೆಯಲು ಇದು ಸಹಕಾರಿಯಾಗುವುದು‘ ಎಂದರು.

‘ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಮ್ಯಾನೇಜ್‌ಮೆಂಟ್‌ನೊಂದಿಗೆ ಮಾತನಾಡಿದ್ದೇನೆ. ದೀರ್ಘ ಕಾಲದಿಂದ ಮೊಣಕೈ ಗಾಯದಿಂದ ಬಳಲಿದ್ದೇನೆ. ಇದೀಗ ಚೇತರಿಸಿಕೊಳ್ಳುತ್ತಿದ್ದು, ಬೇಗನೆ ಕಣಕ್ಕೆ ಮರಳಲಿದ್ದೇನೆ‘ ಎಂದು ಭರವಸೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT