ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಆರ್‌ಸಿಬಿ ಸಂತಾಪ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿಯು ಸಂತಾಪವನ್ನು ಸೂಚಿಸಿದೆ.

'ತುಂಬಾ ಬೇಗ ಹೋಗಿ ಬಿಟ್ಟರು, ಕನ್ನಡ ಚಿತ್ರರಂಗದ ಅತ್ಯಂತ ಪ್ರೀತಿಯ ನಟರಲ್ಲಿ ಓರ್ವರಾದ ಪುನೀತ್ ರಾಜ್‌ಕುಮಾರ್ ನಿಧನದಿಂದ ತೀವ್ರ ದುಃಖವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ, ಅಪ್ಪು!' ಎಂದು ಟ್ವೀಟ್ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಜೊತೆಗೆ ಪುನೀತ್ ರಾಜ್‌ಕುಮಾರ್ ಉತ್ತಮ ಒಡನಾಟವನ್ನು ಹೊಂದಿದ್ದರು.

ಅಲ್ಲದೆ ಆರ್‌ಸಿಬಿ ರಾಯಭಾರಿ ಆಗಿಯೂ ಕೆಲಸ ನಿರ್ವಹಿಸಿದ್ದರು. ಆ ಮೂಲಕ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT