ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಮಫಲ; ಭಾರತೀಯ ಆಟಗಾರರನ್ನು ಅಣಕಿಸಿ ಟ್ರೋಲ್‌ಗೆ ಗುರಿಯಾದ ಶಾಹೀನ್ ಅಫ್ರಿದಿ

Last Updated 12 ನವೆಂಬರ್ 2021, 13:17 IST
ಅಕ್ಷರ ಗಾತ್ರ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ತಂಡವು ಸೋತ ಬೆನ್ನಲ್ಲೇ 'ಕರ್ಮ ರಿಟರ್ನ್ಸ್' ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿತ್ತು.

ಇದಕ್ಕೆ ಪ್ರಮುಖ ಕಾರಣ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ತೋರಿರುವ ಉದ್ಧಟತನವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ನಿಖರ ದಾಳಿ ಸಂಘಟಿಸಿದ್ದ ಶಾಹೀನ್, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್ ಹಾಗೂ ವಿರಾಟ್ ಕೊಹ್ಲಿ ವಿಕೆಟ್‌ಗಳನ್ನು ಕಬಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಅಲ್ಲಿಗೆ ಶಾಹೀನ್ ಆಫ್ರಿದಿ ಸಂಭ್ರಮ ಆಚರಣೆಯು ಮುಗಿಯಲಿಲ್ಲ. ಬಳಿಕ ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆಯಲ್ಲಿ ಭಾರತೀಯ ಆಟಗಾರರನ್ನು ವಿಕೆಟ್ ಪಡೆದಿದ್ದ ರೀತಿಯನ್ನು ಅಣಕಿಸಿದ್ದರು.

ಇದು ಭಾರತೀಯ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ದಾಳಿಯಲ್ಲೇ ಮ್ಯಾಥ್ಯೂ ವೇಡ್ ಹ್ಯಾಟ್ರಿಕ್ ಸಿಕ್ಸರ್ ಸೇರಿದಂತೆ 22 ರನ್ ಚಚ್ಚುವ ಮೂಲಕ ಆಸೀಸ್‌ಗೆ ರೋಚಕ ಗೆಲುವು ಒದಗಿಸಿಕೊಟ್ಟಿದ್ದರು.

ಇದನ್ನೇ ಬೊಟ್ಟು ಮಾಡಿರುವ ಕ್ರಿಕೆಟ್ ಅಭಿಮಾನಿಗಳು ಟ್ವಿಟರ್‌ನಲ್ಲಿ ಶಾಹೀನ್ ಅಫ್ರಿದಿ ಅವರನ್ನು 'ಕರ್ಮಫಲ' ಎಂದು ಟ್ರೋಲ್‌ಗೆ ಗುರಿಯಾಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT