ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುವ ಕರ್ನಾಟಕದ ವೇಗದ ಬೌಲರ್ ವೈಶಾಕ್ ವಿಜಯ್ ಕುಮಾರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರು ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು.

ಇಂದು ಗುರುವಾರ (ಮಾರ್ಚ್ 5) ಬೆಂಗಳೂರಿನ ‘ಮೈನ್ ಪ್ಯಾಲೇಸ್’ನಲ್ಲಿ ನಡೆದ ವಿವಾಹದಲ್ಲಿ, ವೈಶಾಕ್ ಅವರು ತಮ್ಮ ಬಹುಕಾಲದ ಗೆಳತಿ ಸಾಗರಿಕ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಅನೇಕ ಸಹ ಆಟಗಾರರು ಭಾಗಿಯಾಗಿದ್ದರು. ವಿಶೇಷವೆಂದರೆ, ಚಂದನವನದ ನಟ ಕಿಚ್ಚ ಸುದೀಪ್ ಅವರು ಮದುವೆಗೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದರು.

2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ ಅವರು. ಸದ್ಯ 2026ರ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ನಡೆದ ಮಿನಿ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಅವರನ್ನು ₹1.80 ಕೋಟಿ ನೀಡಿ ಖರೀದಿಸಿದೆ.

100ಕ್ಕೂ ಹೆಚ್ಚು ಪ್ರಥಮದರ್ಜೆ ವಿಕೆಟ್ ಪಡೆದಿರುವ ಅವರು ಈ ಬಾರಿಯ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಫೈನಲ್ ಪ್ರವೇಶಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದರು. ಕಳೆದ ದಕ್ಷಿಣ ಆಫ್ರಿಕಾದ ವಿರುದ್ಧದ ಟಿ20 ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು.

ಈಗ ಜೀವನದ ಎರಡನೇ ಇನಿಂಗ್ಸ್ ಆರಂಭಿಸಿರುವ ಅವರಿಗೆ ಕ್ರಿಕೆಟ್ ಲೋಕದ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.