ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ನನಗೆ ಇನ್ನೊಂದು ಅವಕಾಶ ಕೊಡು: ಕರುಣ್ ನಾಯರ್ ಟ್ವೀಟ್ ಚರ್ಚೆಗೆ ಗ್ರಾಸ

Last Updated 11 ಡಿಸೆಂಬರ್ 2022, 21:35 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಿಯ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು’–

ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕರುಣ್ ನಾಯರ್ ಅವರು ಮಾಡಿರುವ ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶನಿವಾರ ಪ್ರಕಟಿಸಲಾದ ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಅವರಿಗೆ ಸ್ಥಾನ ಲಭಿಸಿಲ್ಲ. ಕಳೆದ ಕೆಲವು ಕಾಲದಿಂದ ಅವರು ಫಾರ್ಮ್ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರಿಗೆ ಈಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿ ಟೂರ್ನಿಗಳಿಗೂ ಪರಿಗಣಿಸಿರಲಿಲ್ಲ.

ಆದರೆ ರಣಜಿ ಟೂರ್ನಿಯಲ್ಲಿ ಆಡುವ ಕರ್ನಾಟಕದ ಸಂಭವನೀಯರ ತಂಡದಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ ಕೈಬಿಡಲಾಗಿದೆ. ಉದಯೋನ್ಮುಖ ಆಟಗಾರರಿಗೆ ಅವಕಾಶ ನೀಡಲಾಗಿದೆ.

ಇದರ ಬೆನ್ನಲ್ಲೇ ಕರುಣ್ ಈ ಟ್ವೀಟ್ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ದಾಖಲಿಸಿದ ಭಾರತದ ಎರಡನೇ ಆಟಗಾರನೆಂಬ ಹೆಗ್ಗಳಿಕೆ ಕರುಣ್ ಅವರದ್ದು.

ಕರ್ನಾಟಕದ ಪರವಾಗಿ 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 5922 ರನ್‌ ಗಳಿಸಿದ್ದಾರೆ. 15 ಶತಕ ಹಾಗೂ 27 ಅರ್ಧಶತಕಗಳು ಅದರಲ್ಲಿ ಸೇರಿವೆ. 31 ವರ್ಷದ ಕಳೆದ ಬಾರಿಯ ರಣಜಿ ಟೂರ್ನಿಯ ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಆಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT