ಗುರುವಾರ , ಫೆಬ್ರವರಿ 25, 2021
29 °C

ಸೆ. 8ರಿಂದ ಕರ್ನಾಟಕ ಚಲನಚಿತ್ರ ಕಪ್‌ ‘ಕ್ರಿಕೆಟ್‌ ಟೂರ್ನಿ’ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಚಲನಚಿತ್ರ ಕಪ್‌(ಕೆಸಿಸಿ) ಎರಡನೆಯ ಆವೃತ್ತಿ ಸೆಪ್ಟೆಂಬರ್ 8 ಮತ್ತು 9ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

'ಮೊದಲ ದಿನ ನಾಲ್ಕು ಪಂದ್ಯಗಳು ನಡೆಯಲಿವೆ. ಎರಡನೆಯ ದಿನ ಫೈನಲ್ ಪಂದ್ಯ ಸೇರಿ ಮೂರು ಪಂದ್ಯಗಳು ನಡೆಯಲಿವೆ. ಈ ಬಾರಿ ಅಂತರರಾಷ್ಟ್ರೀಯ ಮಟ್ಟದ ಆರು ಜನ ಕ್ರಿಕೆಟ್ ಆಟಗಾರರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ನಟ ಸುದೀಪ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎರಡು ದಿನಗಳ ಟೂರ್ನಿ ವೀಕ್ಷಣೆಗೆ ಕನಿಷ್ಠ ಟಿಕೆಟ್ ದರ ₹50 ನಿಗದಿ ಮಾಡಲಾಗಿದೆ. ಆನ್‌ಲೈನ್ ಮೂಲಕವೂ ಟಿಕೆಟ್ ಖರೀದಿ ಮಾಡಬಹುದು. ನಟ ಶಿವರಾಜ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು