ಚೆನ್ನೈ: ಇಲ್ಲಿನ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಏಪ್ರಿಲ್ 14ರಂದು ಮುಕ್ತಾಯಗೊಂಡ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗದ ಬೌಲರ್ ಖಲೀಲ್ ಅಹಮದ್ ಅವರು ಗಾಯಗೊಂಡಿದ್ದರು.

ಸಿಎಸ್ಕೆ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಅವರು ಕ್ವಾಡ್ರೈಸ್ಪ್ಸ್ ಗಾಯಕ್ಕೆ ಒಳಗಾಗಿದ್ದರು. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅವರ ಕೋಟಾದ ಇನ್ನೂ ಒಂದು ಎಸೆತ ಬಾಕಿ ಇರುವಾಗ ಮೈದಾನದಿಂದ ಹೊರನಡೆದಿದ್ದರು. ಸದ್ಯ, ಅವರ ಗಾಯದ ಕುರಿತು ಹೆಚ್ಚಿನ ಮಾಹಿತಿ ಹೊರಬಿದ್ದಿದೆ. ‘ಇದು ಗ್ರೇಡ್–2 ಪ್ರಮಾಣದ ಗಾಯ ಮತ್ತು ಚೇತರಿಸಿಕೊಳ್ಳಲು ಕನಿಷ್ಠ 10 ರಿಂದ 12 ವಾರಗಳು ಬೇಕಾಗುತ್ತದೆ’ ಎಂದು ಐಪಿಎಲ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಖಲೀಲ್ ಅಹಮದ್ ಅವರಿಗೆ ಏಪ್ರಿಲ್ 14ರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಬಲಭಾಗದ ಸೊಂಟದ ನೋವಿಗೆ ಒಳಗಾಗಿದ್ದರು ಎಂದು ವರದಿ ತಿಳಿಸಿದೆ.

ಎಡಗೈ ವೇಗಿ ಖಲೀಲ್ ಅಹಮದ್ ಭಾರತ ತಂಡದ ಪರ 11 ಏಕದಿನ ಮತ್ತು 18 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಜುಲೈ 2024ರಲ್ಲಿ ಟೀಂ ಇಂಡಿಯಾ ಪರ ಕಾಣಿಸಿಕೊಂಡಿದ್ದರು. ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 3.5 ಓವರ್ ಬೌಲಿಂಗ್ ಮಾಡಿದ ಖಲೀಲ್ ಅವರು 24 ರನ್ ನೀಡಿ 1 ವಿಕೆಟ್ ಪಡೆದುಕೊಂಡಿದ್ದರು. ಆ ಮೂಲಕ ಸಿಎಸ್ಕೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಭಾರಿಯ ಐಪಿಎಲ್ನಲ್ಲಿ ಆಡಿರುವ 5 ಪಂದ್ಯಗಳಿಂದ 2ರಲ್ಲಿ ಗೆದ್ದು 3ರಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.