ಧರ್ಮಶಾಲಾ (ಪಿಟಿಐ): ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಕಿರನ್ ಪೊಲಾರ್ಡ್ ಅವರು ಐಪಿಎಲ್ ನಿಯಮಾವಳಿಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ.

ಗುರುವಾರ ಪಂಜಾಬ್ ಕಿಂಗ್ಸ್ ಎದುರು ನಡೆದ ಪಂದ್ಯದಲ್ಲಿ ಪೊಲಾರ್ಡ್ ಅವರು ನಾಲ್ಕನೇ ಅಂಪೈರ್ಗೆ ಅವಾಚ್ಯ ಪದಗಳಿಂದ ನಿಂದಿಸಿದರು. ಇದರಿಂದಾಗಿ ಅವರಿಗೆ ಪಂದ್ಯದ ಸಂಭಾವನೆಯ ಶೇ 15ರಷ್ಟು ದಂಡ ವಿಧಿಸಲಾಗಿದೆ.

‘ಎರಡನೇ ಇನಿಂಗ್ಸ್ನ 19ನೇ ಓವರ್ನಲ್ಲಿ ಈ ಘಟನೆ ನಡೆಯಿತು. ನಾಲ್ಕನೇ ಅಂಪೈರ್ಗೆ ಕೆಟ್ಟ ಭಾಷೆಯಲ್ಲಿ ನಿಂದಿಸಿದ ಪೊಲಾರ್ಡ್ ಅವರಿಗೆ ದಂಡ ವಿಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪೊಲಾರ್ಡ್ ಅವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಪಂದ್ಯ ರೆಫರಿ ಪಂಕಜ್ ಧರ್ಮಾನಿ ತೀರ್ಪು ಪ್ರಕಟಿಸಿದ್ದಾರೆ. ಪಂದ್ಯದಲ್ಲಿ ಮುಂಬೈ ತಂಡವು ಪಂಜಾಬ್ ಕಿಂಗ್ಸ್ ಎದುರು 6 ವಿಕೆಟ್ಗಳಿಂದ ಜಯಿಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-476417322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.