ಗುವಾಹಟಿ: ಭಾರತ ಹಾಗೂ ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ ತಂಡದ ಪರ ಆಡಲು ಆಯ್ಕೆಯಾಗಿರುವ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಬಿಸಿಸಿಐ ಕೇಳಿಕೊಂಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2026ನೇ ಸಾಲಿನ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗಳ ಜೊತೆ ತೀವ್ರ ಪೈಪೋಟಿ ನಡೆಸಿ ₹2 ಕೋಟಿ ಮೂಲ ಬೆಲೆ ಹೊಂದಿದ್ದ ಮುಸ್ತಾಫಿಜುರ್ ಅವರನ್ನು ಬರೋಬ್ಬರಿ ₹9.20 ಕೋಟಿ ಕೊಟ್ಟು ಶಾರುಕ್ ಖಾನ್ ಮಾಲೀಕತ್ವದ ಕೆಕೆಆರ್ ಫ್ರಾಂಚೈಸಿ ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಆಡಲು ಆಯ್ಕೆಯಾಗಿರುವ ಮುಸ್ತಾಫಿಜುರ್ ಅವರನ್ನು ತಂಡದಿಂದ ಕೈಬಿಡುವಂತೆ ಹಿಂದೂಪರ ಸಂಘಟನೆಗಳು, ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರು ತೀವ್ರ ಒತ್ತಡ ಹೇರಿದ್ದರು.
.ಬಾಂಗ್ಲಾ ಕ್ರಿಕೆಟಿಗನ ಖರೀದಿ: ಶಾರುಖ್ ಬೆಂಬಲಕ್ಕೆ ನಿಂತ ವಿಪಕ್ಷಗಳು, BJP ವಿರೋಧ.KKR ಮಾಲೀಕ ಶಾರುಖ್ ಖಾನ್ ದೇಶದ್ರೋಹಿ ಎಂದು ಬಿಜೆಪಿ ನಾಯಕ ಆಕ್ರೋಶ.
ಇದೀಗ ಮುಸ್ತಾಫಿಜುರ್ ಅವರನ್ನು ಕೈಬಿಡುವಂತೆ ಬಿಸಿಸಿಐ ಕೆಕೆಆರ್ಗೆ ಸೂಚಿಸಿದ್ದು, ಅಗತ್ಯವಿದ್ದರೆ ಕೆಕೆಆರ್ ತಂಡಕ್ಕೆ ಬದಲಿ ಆಟಗಾರನನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

‘ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಕೇಳಿಕೊಂಡಿದೆ. ಅಗತ್ಯವಿದ್ದರೆ ಅವರು ಬದಲಿ ಆಟಗಾರನನ್ನು ಕೇಳಬಹುದು. ಅದಕ್ಕೆ ಬಿಸಿಸಿಐ ಅನುಮತಿ ನೀಡಲಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಶನಿವಾರ ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.