ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021 | KKR vs DC: ರಿಷಭ್ ಪಂತ್ ನಾಯಕತ್ವಕ್ಕೆ ಮಾರ್ಗನ್ ಸವಾಲು

ಡೆಲ್ಲಿ ಕ್ಯಾಪಿಟಲ್ಸ್‌–ಕೋಲ್ಕತ್ತ ನೈಟ್ ರೈಡರ್ಸ್‌ ಹಣಾಹಣಿ
Last Updated 28 ಏಪ್ರಿಲ್ 2021, 15:02 IST
ಅಕ್ಷರ ಗಾತ್ರ

ಅಹಮದಾಬಾದ್ (ಪಿಟಿಐ): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು ಸೋತ ನಂತರ ಟೀಕೆಗೊಳಾಗಿರುವ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಪುಟಿದೇಳುವ ಛಲದಲ್ಲಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಎದುರು ಡೆಲ್ಲಿ ಆಡಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಸೋತಿರುವ ಡೆಲ್ಲಿ ತಂಡವು ಏಯಾನ್ ಮಾರ್ಗನ್ ಬಳಗಕ್ಕೆ ಕಠಿಣ ಸವಾಲೊಡ್ಡುವುದು ಖಚಿತ. ಕೋಲ್ಕತ್ತ ತಂಡವು ಇದುವರೆಗೆ ಎರಡು ಪಂದ್ಯಗಳಲ್ಲಿ ಮಾತ್ರ ಜಯಿಸಿದೆ. ನಾಲ್ಕರಲ್ಲಿ ಸೋತಿದೆ.

ಮಂಗಳವಾರ ಆರ್‌ಸಿಬಿ ಎದುರು ಶಿಮ್ರೊನ್ ಹೆಟ್ಮೆಯರ್ ಮಿಂಚಿನ ಅರ್ಧಶತಕ ಮತ್ತು ರಿಷಭ ಪಂತ್ ತಾಳ್ಮೆಯ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕೇವಲ ಒಂದು ರನ್ ಅಂತರದಿಂದ ಸೋತಿತ್ತು. ಬೌಲಿಂಗ್‌ನಲ್ಲಿ ಆರಂಭದಲ್ಲಿಯೇ ಹಿಡಿತ ಸಾಧಿಸಿದ್ದರೂ, ಎಬಿ ಡಿವಿಲಿಯರ್ಸ್ ಅವರನ್ನು ಕೊನೆಯ ಹಂತದ ಓವರ್‌ಗಳಲ್ಲಿ ಕಟ್ಟಿಹಾಕಲು ಬೌಲರ್‌ಗಳಿಗೆ ಸಾಧ್ಯವಾಗಿರಲಿಲ್ಲ.

ಬೌಲರ್‌ಗಳ ನಿಯೋಜನೆಯಲ್ಲಿ ಪಂತ್ ಎಡವಿದ್ದಾರೆಂಬ ಟೀಕೆಗಳು ಕೇಳಿಬಂದಿವೆ. ಡೆಲ್ಲಿ ತಂಡವು ಬಲಿಷ್ಠವಾಗಿಯೇ ಇದೆ. ಪೃಥ್ವಿ ಶಾ, ಶಿಖರ್ ಧವನ್, ಸ್ಟೀವ್ ಸ್ಮಿತ್ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಬಲ್ಲರು. ಅಮಿತ್ ಮಿಶ್ರಾ, ಇಶಾಂತ್ ಶರ್ಮಾ, ಆವೇಶ್ ಖಾನ್ ಅವರು ದೊಡ್ಡ ಜೊತೆಯಾಟಗಳಿಗೆ ತಡೆಯೊಡ್ಡಬಲ್ಲರು.

ಈ ಸವಾಲನ್ನು ಮೀರಲು ಕೋಲ್ಕತ್ತದ ಆಟಗಾರರು ಸ್ಥಿರ ಪ್ರದರ್ಶನ ತೋರಬೇಕಿದೆ. ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಶುಭಮನ್ ಗಿಲ್, ಆ್ಯಂಡ್ರೆ ರಸೆಲ್ ಶುಭಮನ್ ಗಿಲ್, ಪ್ಯಾಟ್ ಕಮಿನ್ಸ್, ಸುನಿಲ್ ನಾರಾಯಣ್ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ಡೆಲ್ಲಿಗೆ ಸವಾಲೊಡ್ಡಬಹುದು.

ಪಂದ್ಯ ಆರಂಭ: ರಾತ್ರಿ 7.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT