ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ಲಖನೌ ತಂಡದ ಅವಿಭಾಜ್ಯ ಅಂಗ ಎಂದ ಸಂಜೀವ್ ಗೋಯೆಂಕಾ

Published 29 ಆಗಸ್ಟ್ 2024, 0:12 IST
Last Updated 29 ಆಗಸ್ಟ್ 2024, 0:12 IST
ಅಕ್ಷರ ಗಾತ್ರ

ಕೋಲ್ಕತ್ತ: ಕನ್ನಡಿಗ ಕೆ.ಎಲ್. ರಾಹುಲ್ ಮುಂದಿನ ಐಪಿಎಲ್‌ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಅವರು ‘ರಾಹುಲ್ ತಮ್ಮ ತಂಡದ ಅವಿಭಾಜ್ಯ ಅಂಗ’ ಎಂದು ಸ್ಪಷ್ಟಪಡಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋಯೆಂಕಾ, ಭಾರತ ತಂಡದ ಮಾಜಿ ವೇಗದ ಬೌಲರ್‌ ಜಹೀರ್ ಖಾನ್ ಅವರು ಲಖನೌ ತಂಡದ ಮೆಂಟರ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ.

ಕಳೆದ ಐಪಿಎಲ್ ಟೂರ್ನಿಯಲ್ಲಿ ರಾಹುಲ್ ನೇತೃತ್ವದ ಲಖನೌ ತಂಡವು ಲೀಗ್ ಹಂತದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಅಂದು ಪಂದ್ಯ ಮುಗಿಯುತ್ತಿದ್ದಂತೆಯೇ ಮೈದಾನದಲ್ಲಿಯೇ ಗೋಯೆಂಕಾ ಅವರು ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ ಉಂಟುಮಾಡಿತ್ತು. ಹೀಗಾಗಿ, ಮುಂದಿನ ಆವೃತ್ತಿಯಲ್ಲಿ ರಾಹುಲ್‌ ಲಖನೌ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿ ಹಬ್ಬಿತ್ತು.

‘ನಾನು ಗಾಳಿಸುದ್ದಿಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಆದರೆ, ಒಂದು ಮಾತನ್ನು ಹೇಳಲು ಬಯಸುತ್ತೇನೆ. ರಾಹುಲ್‌ ನಮ್ಮ ತಂಡದ ಅವಿಭಾಜ್ಯ ಅಂಗವಾಗಿದ್ದು, ಅವರು ನಮ್ಮ ಕುಟುಂಬದ ಸದಸ್ಯನಿದ್ದಂತೆ’ ಎಂದು ಚುಟುಕಾಗಿ ಗೋಯೆಂಕಾ ಉತ್ತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT