ಮಂಗಳವಾರ, ಜನವರಿ 18, 2022
15 °C

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಬಡ್ತಿ ಪಡೆದ ಕನ್ನಡಿಗ ರಾಹುಲ್‌, ಬೂಮ್ರಾ, ಶಮಿ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ಕೆ.ಎಲ್‌.ರಾಹುಲ್‌ ಅವರು 18 ಸ್ಥಾನಗಳ ಬಡ್ತಿ ಪಡೆಯುವುದರೊಂದಿಗೆ 31ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ರಾಹುಲ್‌ 113 ರನ್‌ ಗಳಿಸಿದ್ದರು. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1–0 ರಲ್ಲಿ ಮುನ್ನಡೆ ಸಾಧಿಸಿದೆ.

ಭಾರತದ ವೇಗಿಗಳಾದ ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್‌ ಶಮಿ ಅವರೂ ರ‍್ಯಾಂಕಿಂಗ್‌ನಲ್ಲಿ ಪ್ರಗತಿ ಕಂಡಿದ್ದಾರೆ. ಕ್ರಮವಾಗಿ ‌9 ಮತ್ತು 17ನೇ ಸ್ಥಾನದಲ್ಲಿದ್ದಾರೆ.

ಮಯಂಕ್ ಅಗರವಾಲ್ ಒಂದು ಸ್ಥಾನ ಬಡ್ತಿ ಪಡೆದಿದ್ದು, 11ನೇ ಸ್ಥಾನದಲ್ಲಿದ್ದಾರೆ. ಇತ್ತ ಅಜಿಂಕ್ಯ ರಹಾನೆ 25ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 902 ಪಾಯಿಂಟ್ಸ್‌ಗಳೊಂದಿಗೆ ಆಗ್ರ ಸ್ಥಾನದಲ್ಲಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮಾರ್ನಸ್‌ ಲಾಬುಶೇನ್ 912 ಪಾಯಿಂಟ್ಸ್‌ಗಳೊಂದಿಗೆ ಆಗ್ರ ಸ್ಥಾನ ಗಳಿಸಿದ್ದಾರೆ. ಇಂಗ್ಲೆಂಡ್ ನಾಯಕ ಜೋ ರೂಟ್ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ... ಗಂಗೂಲಿ ಪುತ್ರಿ ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರಿಗೆ ಕೋವಿಡ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು